

ಮಡಿಕೇರಿ:
ಶಿಕ್ಷಣ ಫೌಂಡೇಶನ್, ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಹಾಗೂ ಡೆಲ್ ಟೆಕ್ನಾಲಜಿ ಸಹಯೋಗದಲ್ಲಿ ಗ್ರಾಮ ಡಿಜಿ ವಿಕಾಸನ ಕಾರ್ಯಕ್ರಮದಡಿಯಲ್ಲಿ ಸೋಮವಾರಪೇಟೆಯ ತಾಲೂಕಿನ ೫ ಗ್ರಾಮ ಪಂಚಾಯತ್ ಗ್ರಂಥಾಲಯಗಳಿಗೆ ಮತ್ತು ಮಡಿಕೇರಿ ತಾಲೂಕಿನ ೨ ಗ್ರಾಮ ಪಂಚಾಯತ್ ಗ್ರಂಥಾಲಯಗಳಿಗೆ ವಿವಿಧ ಸಾಧನಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜು ಇತ್ತೀಚೆಗೆ ವಿತರಿಸಿದರು.
ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಜಿಲ್ಲಾಧಿಕಾರಿ, ವೆಂಕಟ್ ರಾಜಾ, ಅಪರ ಜಿಲ್ಲಾಧಿಕಾರಿ ವೀಣಾ, ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ವರ್ಣಿತ್ ನೇಗಿ, ಸೋಮವಾರಪೇಟೆ ಮತ್ತು ಮಡಿಕೇರಿ ತಾಲೂಕು ಶಿಕ್ಷಣ ಫೌಂಡೇಶನ್ ಸಂಸ್ತೆಯ ಜಿಲ್ಲಾ ವ್ಯವಸ್ತಾಪಕ ರಕ್ಷಿತ್ ಎಲ್. ಈ ಸಂದರ್ಭ ಇದ್ದರು.