ಫಲಾನುಭವಿಗಳಿಗೆ ಆದೇಶ ಪತ್ರ ವಿತರಣೆ

19 yelandur 05
Published on

ಚಾಮರಾಜನಗರ : ವಿಶ್ವ ಶೌಚಗೃಹ ದಿನದ ಅಂಗವಾಗಿ ಯಳಂದೂರು ಅಂಬಳೆ ಗ್ರಾಮ ಪಂಚಾಯಿತಿಯಲ್ಲಿ ಶೌಚಗೃಹದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಅಲ್ಲದೆ 23 ಫಲಾನುಭವಿಗಳಿಗೆ ಶೌಚಗೃಹ ನಿರ್ಮಾಣಕ್ಕೆ ಮಂಜೂರಾತಿ ಆದೇಶ ಪತ್ರಗಳನ್ನೂ ಸಹ ವಿತರಣೆ ಮಾಡಲಾಯಿತು.


ಅಂಬಳೆ ಗ್ರಾಪಂ ಪಿಡಿಒ ಮಮತಾ ಮಾತನಾಡಿ, ಶೌಚಗೃಹ ನಿರ್ಮಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಸಾರ್ವಜನಿಕರಿಗೆ ಬಯಲು ಶೌಚದಿಂದ ಆಗುವ ದುಷ್ಪರಿಣಾಮಗಳು, ರೋಗಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಅಲ್ಲದೆ ಪಂಚಾಯಿತಿಯನ್ನು ಬಯಲು ಶೌಚಮುಕ್ತ ಮಾಡುವ ನಿಟ್ಟಿನಲ್ಲಿ ನಾವು ಶ್ರಮ ಪಡುತ್ತಿದ್ದೇವೆ. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ವರ್ಗಕ್ಕೆ 20 ಸಾವಿರ ರೂ. ಹಾಗೂ ಸಾಮಾನ್ಯ ವರ್ಗಕ್ಕೆ 12 ಸಾವಿರ ರೂ. ಸಹಾಯಧನವನ್ನು ಶೌಚಗೃಹ ನಿರ್ಮಾಣಕ್ಕೆ ನೀಡಲಾಗುತ್ತಿದೆ ಎಂದರು. ಕಾರ್ಯದರ್ಶಿ ಪುಟ್ಟರಾಜು, ನಂದಿನಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net