ಜಿಲ್ಲಾಡಳಿತದಿಂದ ಪುರಭವನದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

krishna
Published on

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸೆ.6ರಂದು ಬೆಳಗ್ಗೆ 10.30ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಿಸಲಾಗುತ್ತಿದೆ.


ರಾಜ್ಯ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್ ಉಪಸ್ಥಿತರಿರುವರು. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸುವರು. ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ ಎಸ್.ತಂಗಡಗಿ ಗೌರವ ಉಪಸ್ಥಿತಿ ವಹಿಸುವರು. ಶಾಸಕರಾದ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು.


ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ, ಶಾಸಕರಾದ ಡಾ ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು, ಭಾಗೀರಥಿ ಮುರುಳ್ಯ, ಅಶೋಕ್ ಕುಮಾರ್ ರೈ, ಉಮಾನಾಥ ಎ. ಕೋಟ್ಯಾನ್, ವಿಧಾನ ಪರಿಷತ್ ಶಾಸಕರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ಎಂ. ಫಾರೂಕ್, ಕೆ.ಹರೀಶ್ ಕುಮಾರ್, ಎಸ್.ಎಲ್. ಭೋಜೇಗೌಡ, ಪ್ರತಾಪ ಸಿಂಹ ನಾಯಕ್, ಕೆ.ಮಂಜುನಾಥ ಭಂಡಾರಿ, ಮಂಗಳೂರು ಮೇಯರ್ ಜಯಾನಂದ ಅಂಚನ್ ಭಾಗವಹಿಸುವರು.


ವಿಶೇಷ ಆಹ್ವಾನಿತರಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಜಿಲ್ಲಾ ಗೊಲ್ಲ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಟಿ.ಆರ್. ಕುಮಾರಸ್ವಾಮಿ, ಯಾದವ ಸಭಾ ಕರ್ನಾಟಕ ಕೇಂದ್ರ ಸಮಿತಿಯ ಅಧ್ಯಕ್ಷ ಎ.ಕೆ. ಮಣಿಯಾಣಿ ಬೆಳ್ಳಾರೆ ಭಾಗವಹಿಸುವರು. ಶ್ರೀವತ್ಸಾ ಉಪದ್ಯಾಯ ಕೊಲೆಕಾಡಿ ಶ್ರೀ ಕೃಷ್ಣ ಜಯಂತಿ ಸಂದೇಶ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net