ಪತ್ರಿಕಾ ವಿತರಕರಿಗೆ ಜಿಲ್ಲಾಡಳಿತ ನೆರವು; ಜಿಲ್ಲಾಧಿಕಾರಿ ಭರವಸೆ

MDK21
Published on

ಮಡಿಕೇರಿ: ನಮ್ಮ ದಿನಚರಿಯನ್ನು ಪ್ರಾರಂಭಿಸುವ ಸಮಯದಲ್ಲಿಯೇ ಅಂದಿನ ಪತ್ರಿಕೆಗಳನ್ನು ಮನೆ ಮನೆಗಳಿಗೆ ತಲುಪಿಸುವ ಶ್ರಮಜೀವಿಗಳಾದ ಪತ್ರಿಕಾ ವಿತರಕರ ಒಳಿತಿಗಾಗಿ ಮುಂದಿನ ದಿನಗಳಲ್ಲಿ ಪತ್ರಿಕಾ ವಿತರಕರಿಗಾಗಿ ಸೂಕ್ತ ಯೋಜನೆಗಳನ್ನು ಜಾರಿಗೊಳಿಸಲು ಜಿಲ್ಲಾಡಳಿತ ನೆರವು ನೀಡಲಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಭರವಸೆ ನೀಡಿದರು.


ಕೊಡಗು ಪತ್ರಕರ್ತರ ಸಂಘ(ರಿ), ಕೊಡಗು ಜಿಲ್ಲಾ ಪತ್ರಿಕಾ ವಿತರಕರ ಹಾಗೂ ಏಜೆಂಟರ ಸಂಘ ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ (ರಿ) ಆಶ್ರಯದಲ್ಲಿ ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಪತ್ರಿಕಾ ವಿತರಕ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.


ಪತ್ರಿಕಾ ವಿತರಕರರಿಗೆ ಎಲ್ಲಾ ಸಹಕಾರ ಮಾಡಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು. ಇ-ಪೇಪರ್ ಓದುವುದಕ್ಕಿಂತ ಪ್ರಕಟಿತ ಪತ್ರಿಕೆ ಓದುವ ಅನುಭವ ಮನಸ್ಸಿಗೆ ತೃಪ್ತಿ ನೀಡುತ್ತದೆ. ಪತ್ರಿಕಾ ವಿತರಕರಿಗೆ ಸೂಕ್ತ ಮಳಿಗೆಯ ಬೇಡಿಕೆ ನಿಟ್ಟಿನಲ್ಲಿ ಮಡಿಕೇರಿ ನಗರಸಭೆಯ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ವಿಶೇ ಸಭೆಯನ್ನು ನಡೆಸಿ ಸಮಸ್ಯೆಗಳನ್ನು ಇತ್ಯರ್ಥ ಮಾಡಲಾಗುವುದು ಎಂದು ಹೇಳಿದರು.


ಈಗಿನ ಡಿಜಿಟಲ್ ಯುಗದಲ್ಲಿ ವಾಟ್ಸಪ್ ಸೋಶಿಯಲ್ ಮೀಡಿಯಾದಲ್ಲಿ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಸುದ್ದಿ ತಕ್ಷಣ ಲಭಿಸುತ್ತಿದ್ದರೂ ಪ್ರತಿನಿತ್ಯ ಬೆಳಿಗ್ಗೆ ಪತ್ರಿಕೆಯನ್ನು ಓದುವ ಹವ್ಯಾಸವನ್ನು ಇಂದಿಗೂ ನಾನು ರೂಢಿಸಿಕೊಂಡಿದ್ದೇನೆ. ಅದರಲ್ಲೂ ಸ್ಥಳೀಯ ಪತ್ರಿಕೆಯನ್ನು ಓದಿ ಪ್ರಸ್ತುತ ವಿದ್ಯಮಾನಗಳ ಬಗ್ಗೆ ತಿಳಿದು ನನ್ನ ದಿನಚರಿಯನ್ನು ಪ್ರಾರಂಭಿಸುತ್ತೇನೆ ಎಂದು ತಿಳಿಸಿದರು.


ಹಿರಿಯ ಪತ್ರಕರ್ತ ಜಿ.ರಾಜೇಂದ್ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈಗಿನ ತಂತ್ರಜ್ಞಾನದಲ್ಲಿ ದೃಶ್ಯಮಾಧ್ಯಮದಲ್ಲಿ ಶೀಘ್ರವಾಗಿ ಸುದ್ದಿ ಜನರಿಗೆ ತಲುಪುತ್ತದೆಯಾದರೂ ಆ ಸುದ್ದಿಯನ್ನು ವಿಶ್ಲೇ?ಣೆ ಮಾಡಿ ಅವಲೋಕಿಸಿ ತಿಳಿಯಬೇಕೆಂದರೆ ವೃತ್ತ ಪತ್ರಿಕೆಗಳನ್ನು ಓದಬೇಕು. ಪತ್ರಿಕೆಯ ತಯಾರಾದ ನಂತರ ಅದು ಓದುಗರಿಗೆ ತಲುಪಿಸದೆ ಹೋದರೆ ಅಲ್ಲಿವರೆಗೆ ಮಾಡಿದಂತಹ ಪ್ರಯತ್ನ ನಿ?್ಪ್ರಯೋಜಕವಾಗುತ್ತದೆ. ಆದ್ದರಿಂದ ಪತ್ರಿಕಾ ವಿತರಕರು ತುಂಬಾ ಮುಖ್ಯ ಪಾತ್ರ ವಹಿಸುತ್ತಾರೆ ಎಂದು ಹೇಳಿದರು.


ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶಂಕರ್ ಕುದುರೆಮೋತಿ ಮಾತನಾಡಿ, ಪತ್ರಕರ್ತರ ಸಂಘ ಪತ್ರಿಕಾ ವಿತರಕರ ಜೊತೆ ಇದ್ದಾಗ ಮಾತ್ರ ವಿತರಕರು ಬೆಳಕಿಗೆ ಬರಲು ಸಾಧ್ಯ. ಪತ್ರಿಕಾ ವಿತರಕರ ದಿನಾಚರಣೆ ಜೊತೆಗೆ ಪತ್ರಿಕಾ ವಿತರಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವು ಒಳ್ಳೆಯ ಪ್ರಯತ್ನ. ಇನ್ನೂ ಮುಂದೆ ಕೂಡ ಹಲವಾರು ಕಾರ್ಯಕ್ರಮಗಳ ಮೂಲಕ ಪತ್ರಿಕಾ ವಿತರಕರಿಗೆ ಉತ್ತಮ ಸೌಲಭ್ಯಗಳನ್ನು ತಲುಪಿಸಲು ಶ್ರಮಿಸಬೇಕೆಂದು ಮನವಿ ಮಾಡಿದರು.


ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರ ಟಿ.ಪಿ.ರಮೇಶ್, ಸಮಾಜ ಸೇವಕರಾದ ನಾಪಂಡ ಎಂ.ಮುತ್ತಪ್ಪ, ಕೊಡಗು ಪತ್ರಿಕಾ ಭವನ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಉಮೇಶ್, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರುಳೀಧರ್ ಮಾತನಾಡಿದರು.


ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಸುಮಾರು ೬೦ಕ್ಕೂ ಅಧಿಕ ಪತ್ರಿಕಾ ವಿತರಕರಿಗೆ ಗೌರವ ಸಮರ್ಪಣೆ ಮಾಡಲಾಯಿತು.


ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಪತ್ರಿಕಾ ವಿತರಕರ ಹಾಗೂ ಏಜೆಂಟರ ಸಂಘದ ಅಧ್ಯಕ್ಷ ಟಿ.ಜೆ.ಸತೀಶ್, ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಕೆ.ಡಿ.ದಯಾನಂದ, ಹಿರಿಯ ಪತ್ರಕರ್ತ ಜಿ.ಚಿದ್ವಿಲಾಸ್, ನಗರಸಭಾ ಸದಸ್ಯರಾದ ಕೆ.ಎಸ್.ರಮೇಶ್, ಉಮೇಶ್ ಸುಬ್ರಹ್ಮಣಿ, ಸತೀಶ್, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿ?ತ್ ಅಧ್ಯಕ್ಷ ಅಂಬೆಕಲ್ ನವೀನ್, ಮಡಿಕೇರಿ ತಾಲೂಕು ಜಾನಪದ ಪರಿ?ತ್ ಅಧ್ಯಕ್ಷ ಎಚ್.ಟಿ.ಅನಿಲ್ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net