

ರಾಯಚೂರು ಹಸಿರು ಕ್ರಾಂತಿ ಹರಿಕಾರರಾದ ಡಾ.ಬಾಬು ಜಗಜೀವನ ರಾಮï ಅವರ ಆದರ್ಶ, ಚಿಂತನೆಗಳು ಎ¯್ಲÁ ಕಾಲಕ್ಕೂ ಮಾದರಿಯಾಗಿದ್ದು, ಅವರ ವ್ಯಕ್ತಿತ್ವ ಹಾಗೂ ಜೀವನ ಚರಿತ್ರೆಯನ್ನು ಯುವಪೀಳಿಗೆಗೆ ಪರಿಚಯಿಸಬೇಕು ಎಂದು ಎಂಎಲ್‌ಸಿ ಎ.ವಸಂತಕುಮಾರ ಅವರು ಹೇಳಿದರು.
ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮAದಿರದಲ್ಲಿ ಶನಿವಾರ ಜಿ¯್ಲÁಡಳಿತ, ಜಿ¯್ಲÁ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ಡಾ.ಬಾಬು ಜಗಜೀವನ ರಾಮï ಅವರ ೧೧೮ನೇ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ನಾಲ್ಕು ದಶಕಗಳ ಕಾಲ ಸಂಸತ್ ಸದಸ್ಯರಾಗಿ ಅಪರಿಮಿತವಾಗಿ ಸೇವೆ ಸಲ್ಲಿಸಿz್ದÁರೆ. ರಾಷ್ಟದ ಕೃಷಿ ಸಚಿವರಾಗಿ ಹಸಿರು ಕ್ರಾಂತಿಗೆ ಅವರು ನೀಡಿದ ಕೊಡುಗೆ ಅಪಾರವಾಗಿದೆ. ಸ್ವಾತಂತ್ರೋತ್ತರ ಭಾರತದಲ್ಲಿ ಆಹಾರ ಕೊರತೆ ಎದುರಾದಾಗ ಸುಧಾರಿತ ಬಿತ್ತನೆ ಬೀಜ ಹಾಗೂ ಸುಧಾರಿತ ತಳಿಗಳನ್ನು ಅಳವಡಿಸಿಕೊಂಡು ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿ ಹಸಿರುಕ್ರಾಂತಿಯ ಹರಿಕಾರ ಎಂದೇ ಖ್ಯಾತಿಯಾಗಿz್ದÁರೆ ಎಂದರು.
ಹಿAದಿನ ಯುವ ಜನಾಂಗಕ್ಕೆ ಉದ್ಯೋಗ ಮೀಸಲಾತಿ ಸೇರಿದಂತೆ ಸರ್ಕಾರದಿಂದ ಅನೇಕ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಆ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು ಡಾ.ಬಿ.ಆರï.ಅಂಬೇಡ್ಕರï ಹಾಗೂ ಡಾ.ಬಾಬು ಜಗಜೀವ ರಾಮï ಅವರ ಆದರ್ಶದಲ್ಲಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಕೇವಲ ಸರ್ಕಾರಿ ನೌಕರಿಗೆ ಸೀಮಿತವಾಗದೆ ಬೇರೆ ಬೇರೆ ಕ್ಷೇತ್ರಗಳತ್ತ ಒಲವು ತೋರಿಸಬೇಕೆಂದು ಯುವ ಜನಾಂಗಕ್ಕೆ ಸಲಹೆ ನೀಡಿದರು.
ಜಿಲ್ಲಾಽಕಾರಿ ನಿತೀಶ್ ಕೆ. ಅವರು ಮಾತನಾಡಿ, ಹಸಿರು ಕ್ರಾಂತಿಯ ಹರಿಕಾರರಾಗಿದ್ದ ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮï ಅವರ ವಿಚಾರಧಾರೆಗಳು, ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಮುಂದಿನ ೧೦ ವರ್ಷಗಳಲ್ಲಿ ಜಿ¯್ಲೆಯ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ಜೋಡಿಸಿದ್ದಲ್ಲಿ ಮಾತ್ರ ರಾಯಚೂರು ಜಿ¯್ಲÉಯನ್ನು ಮೈಸೂರು ಜಿ¯್ಲÉಯ ರೀತಿಯಲ್ಲಿ ಬದಲಾವಣೆ ಮಾಡಲು ಸಾಧ್ಯ ಎಂದರು.
ಮೈಸೂರು ವಿಶ್ವವಿದ್ಯಾಲಯದ ಡಾ.ಬಾಬು ಜಗಜೀವನ ರಾಮï ಅಧ್ಯಯನ ಕೇಂದ್ರದ ಸಂಶೋಧನಾ ಅಽಕಾರಿ ಡಾ.ಶ್ರೀನಿವಾಸ ಮೂರ್ತಿ ಎಂ. ಉಪನ್ಯಾಸ ನೀಡಿ, ಹಸಿರು ಕ್ರಾಂತಿಯ ಹರಿಕಾರರಾಗಿದ್ದ ಡಾ.ಬಾಬು ಜಗಜೀವನರಾಂ ಅವರು ಅಂದಿನ ಕೇಂದ್ರ ಸರಕಾರದಲ್ಲಿ ಕಾರ್ಮಿಕ, ರೈಲ್ವೆ, ಕೃಷಿ ಮುಂತಾದ ಖಾತೆಗಳ ಮಂತ್ರಿಯಾಗಿ ಆ ಕ್ಷೇತ್ರಗಳಿಗೆ ವಿಶಿಷ್ಟ ಕೊಡುಗೆಗಳನ್ನು ನೀಡಿz್ದÁರೆ. ಶೋಷಿತ ಸಮುದಾಯದಿಂದ ಬಂದವರಾಗಿದ್ದ ಜಗಜೀವನರಾಂ ಅವರು ತಳಸಮುದಾಯ ಜನರನ್ನು ಆತ್ಮವಿಶ್ವಾಸ, ಸ್ವಾಭಿಮಾನಗಳಿಂದ ಬದುಕಲು ಪ್ರೇರೇಪಿಸುತ್ತಿದ್ದರು ಎಂದರು.
ಸಮಾಜ ಸುಧಾರಕ ಮದನಮೋಹನ ಮಾಳವಿಯಾ ಅವರಂತವರ ಪ್ರಭಾವದಿಂದ ವಿಶ್ವವಿದ್ಯಾಲಯದಲ್ಲಿ ಪ್ರವೇಶವನ್ನು ಪಡೆದು ಸಾಧನೆ ಮಾಡಿದರು. ಗಾಂಽÃಜಿಯವರ ಪ್ರಭಾವದಿಂದ ಸ್ವಾತಂತ್ರ÷್ಯ ಹೋರಾಟದಲ್ಲಿಯೂ ಭಾಗವಹಿಸಿದ್ದರು. ಅವರ ದೂರದೃಷ್ಟಿಯ -Àಲವಾಗಿಯೇ ದೇಶದ ಆಹಾರ ಉತ್ಪಾದನೆಯಲ್ಲಿ ್ಲ ದೇಶ ಸ್ವಾವಲಂಬನೆ ಸಾಽಸಿದೆ ಎಂದರೆ ಅದರಲ್ಲಿ ಜಗಜೀವನರಾಂ ಅವರ ಪಾತ್ರ ಹೆಚ್ಚಾಗಿದೆ ಎಂದರು.
ವಿವಿಧ ಗಣ್ಯರಿಂದ ಮಾಲಾರ್ಪಣೆ:
ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಂ ಅವರ ೧೧೮ನೇ ಜಯಂತಿ ಅಂಗವಾಗಿ ನಗರದ ರೈಲ್ವೇ ನಿಲ್ದಾಣ ಹತ್ತಿರವಿರುವ ಡಾ.ಬಾಬು ಜಗಜೀವನ ರಾಮï ಅವರ ಪುತ್ಥಳಿಗೆ ಸಣ್ಣ ನೀರಾವರಿ ಇಲಾಖೆಯ ಸಚಿವರಾದ ಎನ್.ಎಸ್.ಭೋಸರಾಜು ,ಶಾಸಕರಾದ ಬಸನಗೌಡ ದದ್ದಲï, ಎ.ವಸಂತಕುಮಾರï, ಡಿಸಿ ನಿತೀಶï ಕೆ., ಜಿಪಂ ಸಿಇಓ ರಾಹುಲï ತುಕಾರಾಂ ಪಾಂಡ್ವೆ, ಎಸ್ಪಿ ಎಂ.ಪುಟ್ಟಮಾದಯ್ಯ , ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನï ಮೊಹಪಾತ್ರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಚಿದಾನಂದಪ್ಪ ಸೇರಿದಂತೆ ವಿವಿಧ ಗಣ್ಯರಿಂದ ಮಾಲಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಪಾಲಿಕೆಯ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ, ಎಸ್ಪಿ ಪುಟ್ಟಮಾದಯ್ಯ ಎಂ., ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಚಿದಾನಂದಪ್ಪ, ಪಾಲಿಕೆಯ ಉಪ ಆಯುಕ್ತರಾದ ಗುರುಸಿದ್ದಯ್ಯಸ್ವಾಮಿ ಹಿರೇಮಠ, ಜಿ¯್ಲÁ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೃಷ್ಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿರೇಶ ನಾಯಕ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಂದ್ರ ಜಲ್ದಾರ ಸೇರಿದಂತೆ ಇತರರು ಇದ್ದರು.