ಜಿಲ್ಲಾಡಳಿತದಿಂದ ಡಾ.ಮಹಾಂತ ಶಿವಯೋಗಿಗಳ ಜನ್ಮದಿನ, ವ್ಯಸನಮುಕ್ತ ದಿನಾಚರಣೆ

raichur
raichur
Published on

ರಾಯಚೂರು ಬದುಕು ತುಂಬಾ ದೊಡ್ಡದು. ಮಾದಕ ವಸ್ತುಗಳ ವ್ಯಸನದಿಂದ ಜೀವನ ಹಾಳು ಮಾಡಿಕೊಳ್ಳಬಾರದೆಂದು ತಹಸೀಲ್ದಾರ ಸುರೇಶ ವರ್ಮ ಹೇಳಿದರು.

ನಗರದ ಎಸ್.ಕೆ.ಇ. ಪ್ಯಾರಾ ಮೆಡಿಕಲ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶ್ರೀ ಮ.ನಿ.ಪ್ರ.ಡಾ.ಮಹಾಂತ ಶಿವಯೋಗಿಗಳ ಜನ್ಮದಿನ ಹಾಗೂ ವ್ಯಸನಮುಕ್ತ ದಿನಾಚರಣೆ ನಿಮಿತ್ತ ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

ನಂತರ ಮಾತನಾಡಿ, ವಿದ್ಯಾರ್ಥಿ ಯುವಜನರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಡಾ.ಮಹಾಂತ ಶಿವಯೋಗಿಗಳ ಜನ್ಮದಿನದ ಈ ಶುಭ ಸಂದರ್ಭದಲ್ಲಿ ನಾನು ದುಶ್ಚಟ ಮಾಡುವುದಿಲ್ಲ ಎನ್ನುವ ಸಂಕಲ್ಪ ಹೊಂದಿ ವಿದ್ಯಾರ್ಥಿಗಳು ಮನ ಪರಿವರ್ತನೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಡಾ.ಬಾಬುರಾವ್ ಎಂ ಶೇಗುಣಸಿ ಅವರು ಮಾತನಾಡಿ, ಕುಡಿತದ ವ್ಯಸನಕ್ಕೆ ವ್ಯಕ್ತಿಯೊಬ್ಬ ಬಲಿಯಾಗಿ ಇಡೀ ಸಂಸಾರವೇ ಬೀದಿಪಾಲಾದ ಉದಾಹರಣೆಗಳು ನಮ್ಮ ಮುಂದಿವೆ. ಈ ಬಗ್ಗೆ ವಿದ್ಯಾರ್ಥಿಗಳು ಅರಿತು ಮನೆಯಲ್ಲಿನ ಕುಟುಂಬದವರಿಗೆ ಯಾವುದೇ ವ್ಯಸನಕ್ಕೆ ಬಲಿಯಾಗದಂತೆ ತಿಳಿವಳಿಕೆ ಮೂಡಿಸಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ ಮಾತನಾಡಿ, ನಾನು ಯಾವುದೇ ದುಶ್ಚಟವನ್ನು ಮಾಡುವುದಿಲ್ಲ ಎಂದು ಪ್ರತಿಯೊಬ್ಬರು ಸಂಕಲ್ಪ ಮಾಡಿ ಮುಂದುವರೆದಲ್ಲಿ ವ್ಯಕ್ತಿಯು ಸದಾಕಾಲ ಆರೋಗ್ಯದಿಂದ ಇರಬಹುದು. ಉತ್ತಮ ವ್ಯಕ್ತಿಯಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಬಹುದು ಎಂದು ತಿಳಿಸಿದರು.

ನಂತರ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮಾನಸಿಕ ರೋಗ ತಜ್ಞರಾದ ಡಾ.ಮನೋಹರ ಪತ್ತಾರ ಅವರು ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ವಾರ್ತಾ ಇಲಾಖೆಯ ವಾರ್ತಾ ಸಹಾಯಕ ಗವಿಸಿದ್ದಪ್ಪ ಹೊಸಮನಿ, ಬಸಯ್ಯ, ಅರುಣಕುಮಾರ ಕುಲಕರ್ಣಿ, ವಿಕ್ರಮಸಿಂಗ್, ಶೇರ್ಲಿ, ಎ ಪ್ರಕಾಶ, ಅಬ್ಬಾಸ್‌ಖಾನ್, ಮೊಹಮ್ಮದ್ ಅಜರುಲ್ ಹಕ್, ಲವ ಗೋನವಾರ ಸೇರಿದಂತೆ ಇತರರು ಇದ್ದರು.

 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net