ಜಿಲ್ಲಾಡಳಿತದಿಂದ ಶ್ರೀಕೃಷ್ಣ ಜಯಂತಿ ಆಚರಣೆ

raichur
raichur
Published on

ರಾಯಚೂರು ಸಂಘಟನೆಯಿದ್ದರೆ ಒಗ್ಗಟ್ಟು, ಒಗ್ಗಟ್ಟಾಗಿ ಇದ್ದರೆ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ಮುಂದೆ ಬರಲು ಸಾಧ್ಯವೆಂದು ಕರ್ನಾಟಕ ಸಂಘದ ಅಧ್ಯಕ್ಷ ಕೆ.ಶಾಮತಪ್ಪ ಹೇಳಿದರು.

ನಗರದ ಯಾದವ ಸಂಘದ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದವರು, ಸಮಾಜ ಅಭಿವೃದ್ಧಿ ಹೊಂದಲು ಶಿಕ್ಷಣ ಅತ್ಯಂತ ಮುಕ್ಯವಾಗಿರುತ್ತದೆ.

ಸಮಾಜದ ಮಕ್ಕಳಿಗೆ ಶಿಕ್ಷಣ ನೀಡಿದಾಗ ಮಾತ್ರ ಉತ್ತಮ ವ್ಯಕ್ತಿಗಳಾಗಲು ಸಾಧ್ಯ, ಉತ್ತಮ ಶಿಕ್ಷಣ ಪಡೆದ ಮಕ್ಕಳು ಸಮಾಜಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಲು ಸಾಧ್ಯ, ಸಮಾಜದಲ್ಲಿ ಶಿಕ್ಷಣದಿಂದ ವಂಚಿತವಾದ ಮಕ್ಕಳು ಬೆಳೆಯಲು ಸಾಧ್ಯವಿಲ್ಲ. ಮಕ್ಕಳನ್ನು ಬುದ್ದಿವಂತರಾಗಿಸಿ ಸಮಾಜಕ್ಕೆ ದೇಶಕ್ಕೆ ಕೊಡುಗೆಯನ್ನಾಗಿ ನೀಡಬೇಕು ಆದರಿಂದ ಪ್ರತಿಯೊಬ್ಬರು ಒಗ್ಗ ಟ್ಟಿನಿಂದ, ಸೌಹಾರ್ಧತೆಯ ಬದುಕನ್ನು ಕಟ್ಟಿಕೊಳ್ಳಲು ಮುಂದಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಎಂಎಲ್‌ಸಿ ಎ.ವಸಂತಕುಮಾರ ಮಾತನಾಡಿ, ಯಾವುದೇ ಸಮಾಜವು ಪರಿಪೂರ್ಣವಾಗಿ ಅಭಿವೃದ್ಧಿ ಹೊಂದಲು ಶಿಕ್ಷಣ ಅತ್ಯಂತ ಮುಖ್ಯವಾಗಿ ದ್ದು, ಪ್ರತಿಯೊಬ್ಬರು ತಮ್ಮ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡುವ ಮೂಲಕ ಸಮಾಜ ಹಾಗೂ ದೇಶಕ್ಕೆ ಕೊಡುಗೆಯನ್ನಾಗಿ ನೀಡಬೇಕು. ಸಮಾಜದ ಪ್ರತಿಯೊಬ್ಬರೂ ಸಹ ಸೌಹಾರ್ದತೆಯಿಂದ ಶ್ರದ್ದೆಯಿಂದ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡುತ್ತಿದ್ದು, ಧರ್ಮ ಸರಿದಾರಿಯಲ್ಲಿ ನಡೆಯುತ್ತಿದೆ, ಸಮಾಜದ ಬಾಂದವರು ಧರ್ಮದ ಆಚರಣೆಯಲ್ಲಿ ಭಕ್ತಿ ಭಾವದಿಂದ ನಡೆಯುತ್ತಿದ್ದು, ಸಮಾಜದಲ್ಲಿ ಪ್ರತಿಯೊಬ್ಬರು ಬಾತೃತ್ವ ಭಾವನೆಯಿಂದ ಹಾಗೂ ಒಗ್ಗಟ್ಟಿನಿಂದ ಇರಬೇಕು ಎಂಬ ನಿಟ್ಟಿನಲ್ಲಿ ಜಯಂತಿ ಆಚರಣೆಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸದ ಜಿ.ಕುಮಾರ ನಾಯಕ, ನಗರ ಶಾಸಕ ಡಾ.ಶಿವರಾಜ ಪಾಟೀಲ್, ಕಾಂಗ್ರೆಸ್ ಮುಖಂಡ ಮಹ್ಮದ್ ಶಾಲಂ, ಪಾಲಿಕೆ ಸದಸ್ಯ ಜಯಣ್ಣ, ಈ.ಶಶಿರಾಜ, ದರೂರ್ ಬಸವರಾಜ, ಯಾದವ ಸಮಾಜದ ಅಧ್ಯಕ್ಷ ಹನುಮಂತಪ್ಪ ಯಾದವ್, ಮಾರೆಪ್ಪ, ಆರ್‌ಡಿಎ ಮಾಜಿ ಅಧ್ಯಕ್ಷ ತಿಮ್ಮಪ್ಪ ನಾಡಗೌಡ, ಜಯಂತರಾವ್ ಪತಂಗೆ, ನರಸಿಂಹಲು ಮಾಡಗಿರಿ, ದಾನಪ್ಪ ಯಾದವ್, ಜಿ.ರಮೇಶ ಯಾದವ್, ವೆಂಕಟೇಶ, ಮುರಳಿ ಯಾದವ, ಪರಶುರಾಮ ಸೇರಿ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net