ಏಕಲವ್ಯ ವಸತಿ ಶಾಲೆ ಪರೀಕ್ಷೆಗೆ ಜಿಲ್ಲಾಡಳಿತ ಸಿದ್ಧತೆ

Published on

ಚಿಕ್ಕಬಳ್ಳಾಪುರ: ಏಕಲವ್ಯ ವಸತಿ ಶಾಲೆಯ 6ನೇ ತರಗತಿ ಪ್ರವೇಶ ಪರೀಕ್ಷೆಯನ್ನು ಪಾರದರ್ಶಕ ರೀತಿಯಲ್ಲಿ ಸಮರ್ಪಕವಾಗಿ ಕೈಗೊಳ್ಳಲು ಅಪರ ಜಿಲ್ಲಾಧಿಕಾರಿ ಡಾ.ಎನ್. ಭಾಸ್ಕರ್ ಸಂಬAಧಪಟ್ಟ ಇಲಾಖೆಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಕೈಗೊಂಡಿದ್ದ ಏಕಲವ್ಯ ವಸತಿ ಶಾಲೆಯ ೬ನೇ ತರಗತಿ ಪ್ರವೇಶಾತಿ ಪರೀಕ್ಷೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಫೆ.15 ರಂದು ಪರೀಕ್ಷೆ ನಡೆಯಲಿದ್ದು ಮಧ್ಯಾಹ್ನ 12 ಗಂಟೆಗೆ ಪ್ರಶ್ನೆ ಪತ್ರಿಕೆಗಳನ್ನು ಮಾರ್ಗಾಧಿಕಾರಿಗಳು ಜಿಲ್ಲಾ ಖಜಾನೆಯಿಂದ ಸ್ವೀಕರಿಸಿ, ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ತಲುಪಿಸಬೇಕು. ಹಾಗೆಯೇ ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆಗಳ ರಹಸ್ಯ ಬಂಡಲ್ ಗಳನ್ನು ಅಂಚೇ ಕಚೇರಿಯ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಕಳುಹಿಸಿಕೊಡಬೇಕೆಂದು ಸೂಚಿಸಿದ್ದಾರೆ. .

ಪರೀಕ್ಷಾ ಕೇಂದ್ರದಿAದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ರ್ನಿಬಂಧ ಹೇರಿದ್ದು ಪರೀಕ್ಷಾ ಕೇಂದ್ರಗಳಿಗೆ ಹಾಗೂ ಮಾರ್ಗಾಧಿಕಾರಿ ವಾಹನಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವಾಗ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರಬಾರದು. ಪ್ರವೇಶಾನುಮತಿ ಪತ್ರದಲ್ಲಿ ಕೊಟ್ಟಿರುವ ಸೂಚನೆಗಳನ್ನು ಮೊದಲೇ ಓದಿಕೊಂಡು ಪಾಲಿಸಬೇಕು. ಈ ನಿಟ್ಟಿನಲ್ಲಿ ಸಂಬAಧಪಟ್ಟ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಪಾಲಕರು ಮಕ್ಕಳಿಗೆ ಮಾರ್ಗದರ್ಶನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

*10 ಪರೀಕ್ಷಾ ಕೇಂದ್ರಗಳು

ಫೆ.15 ರಂದು ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ಏಕಲವ್ಯ ವಸತಿ ಶಾಲೆಯ 6ನೇ ತರಗತಿ ಪ್ರವೇಶ ಪರೀಕ್ಷೆ ನಡೆಯಲಿದೆ. ಇದಕ್ಕೆ ಜಿಲ್ಲೆಯ 6 ತಾಲೂಕುಗಳ 10 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಪ್ರತಿ ಕೇಂದ್ರಗಳಲ್ಲಿ ಸಮರ್ಪಕ ಕುಡಿಯುವ ನೀರು, ಆಸನ ಸೇರಿದಂತೆ ವಿವಿಧ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ. ಒಂದು ಕೊಠಡಿಗೆ ತಲಾ 24 ವಿದ್ಯಾರ್ಥಿಗಳಿಗೆ ಕೂರಲು ಅವಕಾಶ ಇದ್ದು ಮತ್ತು ಒಂದು ಕೊಠಡಿಗೆ ಕರ್ತವ್ಯ ನಿರ್ವಹಣೆಗೆ ಒಬ್ಬ ಮೇಲ್ಚಿಚಾರಕರನ್ನು ನೇಮಿಸಲಾಗಿದೆ. ಪರೀಕ್ಷಾ ಕೊಠಡಿಯ ಆಸನ ವ್ಯವಸ್ಥೆಯ ಮಾಹಿತಿಯನ್ನು ಕಾಲೇಜಿನ ಆವರಣದಲ್ಲಿನ 3 ರಿಂದ 4 ಕಡೆ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗುತ್ತದೆ. ಇದರ ಮೂಲಕ ವಿದ್ಯಾರ್ಥಿಗಳು ಒಂದೇ ಕಡೆ ಗುಂಪು ಸೇರಿ, ಗೊಂದಲಕ್ಕೀಡಾಗುವುದನ್ನು ನಿವಾರಿಸಲಾಗುತ್ತಿದೆ.

*3,389 ವಿದ್ಯಾರ್ಥಿಗಳು

ಪರೀಕ್ಷೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 3,389 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊAಡಿದ್ದಾರೆ. ಪರೀಕ್ಷಾ ದಿನದಂದು ಪರೀಕ್ಷೆಗೆ ಹಾಜರಾಗುವ ಮತ್ತು ಗೈರು ಹಾಜರಾಗುವ ಅಭ್ಯರ್ಥಿಗಳ ಮಾಹಿತಿಯನ್ನು ಆನ್ ಲೈನ್ ಮೂಲಕ ದಾಖಲಿಸಲಾಗುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net