

ಮಂಗಳೂರು: ಸಿಎಂ ಸಿದ್ದರಾಮಯ್ಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಮಂಗಳವಾರ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅವರನ್ನು ಜಿಲ್ಲಾಡಳಿತದಿಂದ ಸ್ವಾಗತಿಸಲಾಯಿತು.
ಇವರ ಜತೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನೂ ಸ್ವಾಗತಿಸಲಾಯಿತು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್‌ದೀಪ್ ಕುಮಾರ್ ಜೈನ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್, ಎಸ್ಪಿ ರಿಷ್ಯಂತ್, ಡಿಸಿಪಿ ಅನ್ಶುಕುಮಾರ್ ಮೊದಲಾದವರು ಹಾಜರಿದ್ದರು.