ಜಿಲ್ಲಾಡಳಿತದಿಂದ ಕಿತ್ತೂರು ರಾಣಿ ಚನ್ನಮ್ಮ ವಿಜಯ ಜ್ಯೋತಿ ರಥ ಸ್ವಾಗತ

Screenshot_2025-10-24-02-45-43-88.jpg
Published on

ಧಾರವಾಡ: ಧಾರವಾಡ ಜಿಲ್ಕೆಗೆ ಆಗಮಿಸುದ್ದ ಕಿತ್ತೂರು ರಾಣಿ ಚನ್ನಮ್ಮ ಅವರ ವಿಜಯ ಜ್ಯೋತಿ ರಥಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಜಿಲ್ಲಾಡಳಿತದಿಂದ ಸ್ವಾಗತಿಸಲಾಯಿತು.

ಧಾರವಾಡ ಜಿಲ್ಲೆಯ ಹಾರೋಬೆಳವಡಿ ಮಾರ್ಗವಾಗಿ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಆಗಮಿಸಿದ್ದ ವಿಜಯ ಜ್ಯೋತಿ ರಥಕ್ಕೆ ಮಾಜಿ ಶಾಸಕ ಹಾಗೂ ಕ.ವಿ.ವ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಉಪವಿಭಾಗಾಧಿಕಾರಿ ಶಾಲಂ ಹುಸೇನ್ ಅವರು ಪೂಜೆ ಸಲ್ಲಿಸಿ, ಪುಷ್ಪಾರ್ಪಣೆ ಮಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೆರಿ ಅವರು ಕಾರ್ಯಕ್ರಮ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಉಪ ಪೊಲೀಸ್ ಅಧೀಕ್ಷಕ ವಿನೋದ ಮುಕ್ತೆದಾರ, ಗಣ್ಯರಾದ ಸಿ.ಬಿ.ಪಾಟೀಲ ಸೇರಿ ವಿವಿಧ ಪ್ರಮುಖರು ಭಾಗವಹಿಸಿ, ಕಿತ್ತೂರು ರಾಣಿ ಚನ್ನಮ್ಮ ಅವರ ವಿಜಯ ಜ್ಯೋತಿ ರಥಕ್ಕೆ ಪುಷ್ಪಾರ್ಪಣೆ ಸಲ್ಲಿಸಿದರು.

ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಿದ್ದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net