ಗರಡಿ ಉತ್ಸವಕ್ಕೆ ಜಿಲ್ಲಾಡಳಿತದಿಂದ ಪೂರ್ಣ ಸಹಕಾರ ಸಚಿವ ಸುನಿಲ್ ಕುಮಾರ್

IMG-20230302-WA0005
Published on

ಶಾಸಕ ವೇದವ್ಯಾಸ ಕಾಮತ್, ಗರಡಿ ಕ್ಷೇತ್ರದ ಅಧ್ಯಕ್ಷ ಚಿತ್ತರಂಜನ್ ಕೆ., ಗರಡಿ ಉತ್ಸವದ ಅಧ್ಯಕ್ಷ ಮೋಹನ್ ಉಜ್ಜೋಡಿ, ಮೊಕ್ತೇಸರರಾದ ಕಿಶೋರ್, ದಿನೇಶ್ ಅಂಚನ್, ಆರ್ಥಿಕ ಸಮಿತಿ ಸಂಚಾಲಕ ಶರಣ್ ಪಂಪ್ ವೆಲ್ ಉಪಸ್ಥಿತರಿದ್ದರು.

ಉತ್ಸವ ಹಿನ್ನಲೆಯಲ್ಲಿ ಸ್ಮಾರ್ಟ್ ಸಿಟಿ ರಸ್ತೆ ಕಾಮಗಾರಿ, ಪೊಲೀಸ್ ಇಲಾಖೆಯಿಂದ ಟ್ರಾಫಿಕ್ ವ್ಯವಸ್ಥೆ, ಪರ್ಯಾಯ ಸಂಚಾರ ವ್ಯವಸ್ಥೆ, ಸಿಸಿ ಕ್ಯಾಮೆರಾ ಅಳವಡಿಕೆ, ಆರೋಗ್ಯ ಇಲಾಖೆಯಿಂದ ಪ್ರಥಮ ಚಿಕಿತ್ಸೆ, ಅಂಬುಲೆನ್ಸ್ ವ್ಯವಸ್ಥೆ, ಶುಚಿತ್ವ ವ್ಯವಸ್ಥೆ, ಮೆಸ್ಕಾಂನಿಂದ ವಿದ್ಯುತ್ ಕಂಬಗಳ ಶಿಪ್ಟ್ ಸೇರಿದಂತೆ ಇತರ ವ್ಯವಸ್ಥೆ, ಅಗ್ನಿಶಾಮಕ ದಳದಿಂದ ಪಡೆ ನಿಯೋಜನೆ ಸೇರಿದಂತೆ ಇತರ ವ್ಯವಸ್ಥೆ ಗಳ ಬಗ್ಗೆ ನಿರ್ದೇಶನ ನೀಡಿದರು.

ಮಂಗಳೂರು: ತುಳುನಾಡಿನ ಕಾರಣೀಕ ಸಾನಿದ್ಯವಾದ ಕಂಕನಾಡಿ‌ ಗರಡಿ ಬ್ರಹ್ಮಬೈದರ್ಕಳ ಕ್ಷೇತ್ರದ 150ನೇ ಸಂಭ್ರಮದ ಯಶಸ್ಸಿಗೆ ಜಿಲ್ಲಾಡಳಿತದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಗುರುವಾರ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಪೂರ್ವ ಸಿದ್ಧತೆ ವೀಕ್ಷಿಸಿ ಮಾತನಾಡಿದರು. ಸ್ಥಳೀಯ ಆಡಳಿತ ಕೂಡ ಸಹಕಾರ ನೀಡಲಿದೆ. ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಜಿಲ್ಲಾಡಳಿತ, ಮನಪಾ, ಪೊಲೀಸ್ ಇಲಾಖೆ ಸೇರಿದಂತೆ ಇತರ ಇಲಾಖೆ ಕಾರ್ಯಕ್ರಮದ ಒಟ್ಟು ಯಶಸ್ಸಿಗೆ ಕೈಜೋಡಿಸಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net