ಗ್ಯಾರಂಟಿ ಯೋಜನೆಗಳ ಜಿಲ್ಲಾ ಪ್ರಾಧಿಕಾರ ಸಭೆ

je721538035802367-abc
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಗ್ಯಾರಂಟಿ ಯೋಜನೆಗಳಿಂದ ಬಡ ಜನರಿಗೆ ಅನುಕೂಲವಾಗಿದೆ. ಈ ಯೋಜನೆಯಿಂದ ಗ್ರಾಮೀಣ ಪ್ರದೇಶದ ಮಹಿಳೆಯರು ಸ್ವಾವಲಂಬಿಗಳಾಗಿ ಸ್ವಂತ ಉದ್ಯೋಗ ಮಾಡುತ್ತಿದ್ದಾರೆ ಎಂದು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಸ್​.ಆರ್​. ಪಾಟೀಲ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯ ವಿಧಾನಗಳು ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕುರಿತ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ಯಾರಂಟಿ ಯೋಜನೆ ಬಗ್ಗೆ ನಗರ ಹಾಗೂ ಗ್ರಾಮಗಳಲ್ಲಿ ಹೆಚ್ಚಿನ ಪ್ರಚಾರ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಯುವ ನಿಧಿ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ. ಹೆಚ್ಚು ಪ್ರಚಾರ ಮಾಡುವ ಕುರಿತು ಕರ ಪತ್ರಗಳ ಬಿಡುಗಡೆ ಮಾಡಿದರು.

ಉಪ ಕಾರ್ಯದರ್ಶಿ ಬಿ.ಎಸ್​. ಮೂಗನೂರಮಠ ಮಾತನಾಡಿ, ನಗರ ಹಾಗೂ ಗ್ರಾಮೀಣ ಮಟ್ಟದಲ್ಲಿ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಯುವ ನಿಧಿ ಯೋಜನೆ ಬಗ್ಗೆ ಹೆಚ್ಚಿನ ಪ್ರಚಾರ ಮಾಡಬೇಕು ಎಂದರು.

ಪ್ರಾಧಿಕಾರದ ಉಪಾಧ್ಯಕ್ಷ ಅರವಿಂದ ಏಗನಗೌಡರ, ಮುರಗಯ್ಯ ವಿರಕ್ತಮಠ, ಅಬ್ದುಲ್​ ರಶೀದ ಬೋಳಾಬಾಯಿ, ರತ್ನಾ ತೇಗೂರಮಠ ಮಾತನಾಡಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು, ಸದಸ್ಯರು, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net