ಜಿಲ್ಲಾ ಆಯುಷ್ ಅಧಿಕಾರಿ ಅಮಾನತು

Published on

ಸಂಬಳ ಬಿಡುಗಡೆಗೆ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಹಿನ್ನೆಲೆ | ಸರ್ಕಾರ ಆದೇಶ

ರಾಮನಗರ: ಡಿ ಗ್ರೂಪ್ ನೌಕರೊಬ್ಬರ ಸಂಬಳ ಬಿಡುಗಡೆಗೆ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ನಡೆದ ಪ್ರಾಥಮಿಕ ತನಿಖೆಯಲ್ಲಿ ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾ ಆಯುಷ್ ಅಧಿಕಾರಿ ಡಾ.ಕೆ.ವಿ.ಆನಂದ್ ಅವರನ್ನು ಅಮಾನತ್ತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಡಿ ಗ್ರೂಪ್ ಸಿಬ್ಬಂದಿಯೊಬ್ಬರ ಬಾಕಿ ವೇತನ, ಇತರೆ ವೈದ್ಯರಿಂದ ಲಂಚ ಪಡೆದ ದೂರು ಮತ್ತು ಕಚೇರಿಯಲ್ಲಿ ದಾಖಲೆಗಳ ದುರುಪಯೋಗ ಸೇರಿ ಹಲವು ಆರೋಪಗಳು ಡಾ.ಕೆ.ವಿ.ಆನಂದ್ ಅವರ ಮೇಲಿದ್ದವು. ಈ ಹಿನ್ನೆಲೆಯಲ್ಲಿ ಇವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ನೋಟಿಸ್ ನೀಡಿದ್ದರು. ಇವರಿಂದ ಬಂದ ಉತ್ತರ ಸಮರ್ಪಕವಾಗಿ ಇಲ್ಲದ ಹಿನ್ನೆಲೆಯಲ್ಲಿ ಹಾಗೂ ಅಧಿಕಾರಿಗಳ ತಂಡ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡಿತ್ತು. ಆರೋಪಗಳು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಡಾ.ಕೆ.ವಿ.ಆನಂದ್ ಅವರನ್ನು ಅಮಾನತ್ತುಗೊಳಿಸಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಕೆ ಅಧೀನ ಕಾರ್ಯದರ್ಶಿ ಶ್ರೀಪತಿ ಪಿ.ಕೆ. ಇಲಾಖೆ ವಿಚಾರಣೆಯನ್ನು ಬಾಕಿಯಿರಿಸಿ, ಡಾ.ಕೆ.ವಿ.ಆನಂದ್ ಅವರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net