

ಮಡಿಕೇರಿ: ಕೊಡಗು ವಿಶ್ವ ವಿದ್ಯಾಲಯವನ್ನು ರದ್ದುಗೊಳಿಸಬಾರದು, ಸಿ ಮತ್ತು ಡಿ ಭೂಮಿಯ ಗೊಂದಲ ನಿವಾರಿಸಬೇಕು, ಪರಿಶಿಷ್ಟರ ಅನುದಾನವನ್ನು ಉಚಿತ ಭಾಗ್ಯಗಳಿಗೆ ಬಳಸಬಾರದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹ ಶುಕ್ರವಾರ ಸಮಾಪ್ತಿಗೊಂಡಿತು.
ಈ ಸಂದರ್ಭ ಮಾತನಾಡಿದ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ಕೊಡಗು ವಿವಿ ಜಿಲ್ಲೆಯ ಮಕ್ಕಳಿಗೆ ಅನುಕೂಲಕರವಾಗಿದೆ. ಆರ್ಥಿಕ ವಿಫಲತೆಯಿಂದ ರಾಜ್ಯ ಸರ್ಕಾರ ಮುಚ್ಚಲು ಹೊರಟಿರುವುದು ಸರಿಯಲ್ಲ. ಯಾವುದೇ ಕಾಣರಕ್ಕೂ ಕೊಡಗು ವಿಶ್ವವಿದ್ಯಾಲಯ ವಿಲೀನವಾಗಬಾರದು ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪತ್ರಿಭಟನಾ ನಿರತರು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಮಾಜಿ ಸಚಿವ ಮತ್ತು ಮಾಜಿ ಶಾಸಕ ಅಪ್ಪಚ್ಚು ರಂಜನ್, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಬಿಜೆಪಿ ಜಿಲ್ಲಾ ವಕ್ತಾರ ಬಿ.ಕೆ.ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಮಹಿಳಾ ಮೋರ್ಚಾದ ಅಧ್ಯಕ್ಷೆ ಅನಿತಾ ಪೂವಯ್ಯ, ಮಡಿಕೇರಿ ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಸೇರಿದಂತೆ ವಿವಿಧ ಮೋರ್ಚಾಗಳ ಪ್ರಮುಖರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.