28ಕ್ಕೆ ಜಿಲ್ಲಾ ಬಿಜೆಪಿ ಬೃಹತ್​ ಪ್ರತಿಭಟನೆ

udp-24-bjp
Published on

ಉಡುಪಿ: ಅನುಸೂಚಿತ ಜಾತಿ ಮತ್ತು ಗಿರಿಜನ ಉಪಯೋಜನೆಯ (ಎಸ್​.ಸಿ.ಎಸ್​.ಪಿ. - ಟಿ.ಎಸ್​.ಪಿ.) ಸುಮಾರು 25,000 ಕೋಟಿ ರೂ. ಹೆಚ್ಚು ಹಣವನ್ನು ದುರ್ಬಳಕೆ ಮಾಡಿರುವ ದಲಿತ ದ್ರೋಹಿ ಕಾಂಗ್ರೆಸ್​ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಫೆ.28ರಂದು ಜಿಲ್ಲಾ ಬಿಜೆಪಿ ವತಿಯಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಬೃಹತ್​ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಕಿಶೋರ್​ ಕುಮಾರ್​ ಕುಂದಾಪುರ ತಿಳಿಸಿದರು.

ಸೋಮವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಪ್ರಮುಖರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯಾದ್ಯಂತ ಜನಾಂದೋಲನವನ್ನು ರೂಪಿಸಿರುವ ಬಿಜೆಪಿ ಈಗಾಗಲೇ 14 ತಂಡಗಳನ್ನು ರಚಿಸಿದ್ದು, ರಾಜ್ಯ ತಂಡದ ಪ್ರಮುಖರಾದ ಸಂಸದ ರಮೇಶ್​ ಜಿಗಜಿಣಗಿ, ವಿಧಾನ ಪರಿಷತ್​ ಸದಸ್ಯ ಎನ್​.ರವಿಕುಮಾರ್​ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್​ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್​ ನಾಯಕ್​, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ರಾಜ್ಯ ಎಸ್​.ಸಿ. ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು, ಜಿಲ್ಲಾ ಎಸ್​.ಸಿ. ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್​ ಕಾವೇರಿ, ಜಿಲ್ಲಾ ಉಪಾಧ್ಯಕ್ಷರಾದ ಪೆರ್ಣಂಕಿಲ ಶ್ರೀಶ ನಾಯಕ್​, ಕಿರಣ್​ ಕುಮಾರ್​ ಬೈಲೂರು, ಪ್ರಕಾಶ್​ ಶೆಟ್ಟಿ ಪಾದೆಬೆಟ್ಟು, ಸದಾನಂದ ಉಪ್ಪಿನಕುದ್ರು, ಸುರೇಶ್​ ಶೆಟ್ಟಿ ಕಾಡೂರು, ಜಯರಾಮ ಸಾಲ್ಯಾನ್​, ಜಿಲ್ಲಾ ಕೋಶಾಧಿಕಾರಿ ಮನೋಹರ್​ ಎಸ್​. ಕಲ್ಮಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್​ ಅಂಬಲಪಾಡಿ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net