ಜಿಲ್ಲಾ ಬಿಜೆಪಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಮುಂಬರುವ ಚುನಾವಣೆಗಳಿಗೆ ಸಿದ್ದರಾಗಿ- ಬಸವರಾಜ

RAICHUR BJP PROGRAM
RAICHUR BJP PROGRAM
Published on

ರಾಯಚೂರು ಬಿಜೆಪಿಯ ಹಿರಿಯ ನಾಯಕರು ಸೇರಿ ಜಿಲ್ಲಾಧ್ಯಕ್ಷರ ಆಯ್ಕೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲಾಧ್ಯಕ್ಷರಿಂದ ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಸಂಘಟನೆ ಬಲಪಡಿಸುವಲ್ಲಿ ಕಾರ್ಯ ನಿರ್ವಹಿಸುವುದರ ಜತೆಗೆ ಮುಂಬರುವ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನವನ್ನು ಪಡೆಯಲು ಶ್ರಮಿಸಬೇಕೆಂದು ಜಿಲ್ಲಾ ವೀಕ್ಷಕ ಬಸವರಾಜ ಮುತ್ತಿಮೂಡ ಹೇಳಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ಅಽಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಬಲಿಷ್ಠ ಪಕ್ಷವನ್ನು ಕಟ್ಟಲು ಪ್ರತಿಯೊಬ್ಬರ ಶ್ರಮ ಅತ್ಯಗತ್ಯವಾಗಿರುತ್ತದೆ. ಜಿಲ್ಲೆಯ ಎಲ್ಲಾ ಮಂಡಲಗಳಿಗೆ ಭೇಟಿ ನೀಡಿ, ಕಾರ್ಯಕರ್ತರನ್ನು ಒಗ್ಗೂಡಿಸುವ ಕೆಲಸಕ್ಕೆ

ಜಿಲ್ಲಾಧ್ಯಕ್ಷರು ಮುಂದಾಗಬೇಕು ಎಂದು ಕರೆ ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಅಽಕಾರ ಸ್ವೀಕರಿಸಿದ ವೀರನಗೌಡ ಲೆಕ್ಕಿಹಾಳ ಮಾತನಾಡಿ, ಜಿಲ್ಲೆಯ ಎಲ್ಲಾ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಗುರುತರವಾದ ಜವಾಬ್ದಾರಿಯನ್ನು ಹೆಗಲಿಕೆ ಹಾಕಿದ್ದು, ಅವರ

ಗೌರವಕ್ಕೆ ಚುತಿ ಬಾರದ ಹಾಗೆ ಎಲ್ಲ ಹಿರಿಯರ ಮಾರ್ಗದರ್ಶನದೊಂದಿಗೆ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.

ರಾಜ್ಯ ಬಿಜೆಪಿ ಘಟಕ ನೀಡುವ ಹೋರಾಟದ ಸೂಚನೆಗಳು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಹಾಗೂ ಜಿಲ್ಲೆಯ ಪಕ್ಷದ ಹಿರಿಯ ಸಲಹೆಯಂತೆ ಜಿಲ್ಲೆಯ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರವನ್ನು ಎಚ್ಚರಿಸುವ

ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು. ನಾನು ವ್ಯಕ್ತಿಯ ಬಣಕ್ಕೆ ಸೇರಿದವನಲ್ಲ ನಾನು ಕಮಲದ ಬಣದವನಾಗಿದ್ದೇನೆ. ಜಿಲ್ಲೆಯ ಹಿರಿಯ ನಾಯಕರ ಜೊತೆಗೆ ಒಟ್ಟು ಗೂಡಿಕೊಂಡು ಹೋಗುವ ವ್ಯಕ್ತಿ ನಾನಲ್ಲ. ಬಣ ರಾಜಕೀಯ ಪಕ್ಷದ ಮೇಲೆ ಪ್ರಭಾವ ಬೀರುವುದು ಸಹಜ ಆದರೆ ರಾಜ್ಯ ಹಾಗೂ ಹೈಕಮಾಂಡ್ ಸೂಕ್ತ ತೀರ್ಮಾಣ ತೆಗೆದುಕೊಂಡು ಸಮಸ್ಯೆ ಬಗೆಹರಿಸುವ ಭರವಸೆ ಇದೆ.

ಈಲ್ಲೆಯಲ್ಲಿ ಯಾವುದೇ ರೀತಿಯ ಬಣ ರಾಜಕಾರಣ ಇಲ್ಲ ಎಂದರು.

ಈ ಸಂದರ್ಭದಲ್ಲಿ ನಗರ ಶಾಸಕ ಡಾ.ಶಿವರಾಜ ಪಾಟೀಲ್, ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ್, ಮಾಜಿ ಶಾಸಕರಾದ ಎ.ಪಾಪಾರೆಡ್ಡಿ, ಬಸನಗೌಡ ಬ್ಯಾಗವಾಟ್, ಪ್ರತಾಪ್‌ಗೌಡ ಪಾಟೀಲ್, ಶಾಸಕ ಮಾನಪ್ಪ ವಜ್ಜಲ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net