ಶಾಸಕರ ಅಮಾನತ್ತು ಖಂಡಿಸಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

BJP PROTEST
BJP PROTEST
Published on

ರಾಯಚೂರು ಸದನದಲ್ಲಿ ೬ ತಿಂಗಳ ಕಾಲ ೧೮ ಜನ ಶಾಸಕರ ಅಮಾನತ್ತು ಮಾಡಿದನ್ನು ಖಂಡೀಸಿ ಜಿಲ್ಲಾ ಬಿಜೆಪಿ ಪಕ್ಷದಿಂದ ಸೋಮವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡಿ ನಂತರ ಡಿಸಿ ಕಚೇರಿಯ ಗ್ರೇಡ್ ೨ ತಹಸೀಲ್ದಾರ್ ಪರಶುರಾಮ ಅವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕದ ವಿಧಾನಸಭೆಯಲ್ಲಿ ವಿಧಾನ ಸಭಾಧ್ಯಕ್ಷರು ಬಿಜೆಪಿಯ ೧೮ ಶಾಸಕರನ್ನು ೬ ತಿಂಗಳ ಕಾಲ ಅಮಾನತು ಮಾಡಿರುವುದು ಸಂಪೂರ್ಣವಾಗಿ ಕಾನೂನುಬಾಹಿರ, ಅಸಾಂವಿಧಾನಾತ್ಮಕ, ಏಕಪಕ್ಷೀಯ ಹಾಗೂ ಮನಸೋಇಚ್ಛೆಯಿಂದ ತೆಗೆದುಕೊಂಡ ತೀರ್ಮಾನ ಹಾಗೂ ಜನರಿಂದ ಆಯ್ಕೆಯಾದ ಶಾಸಕರಿಗೆ ಅಷ್ಟೇ ಅಲ್ಲದೆ ಕ್ಷೇತ್ರದ ಮತದಾರರಿಗೂ ಮಾಡಿದ ಅವಮಾನ ಎಂದು ಬಿಜೆಪಿ ಜಿ¯್ಲÁ ಘಟಕವು ತೀವ್ರವಾಗಿ ಖಂಡಿಸುತ್ತದೆ ಎಂದರು.

ಶಾಸಕರ ಸಂವಿಧಾನ ದತ್ತ ಹಕ್ಕನ್ನು ಕಿತ್ತುಕೊಳ್ಳುವಂತಹ ಸಂವಿಧಾನ ಬಾಹಿರ ನಿರ್ಧಾರವನ್ನು ತೆಗೆದುಕೊಂಡ ವಿಧಾನಸಭಾ ಅಧ್ಯಕ್ಷರ ನಿರ್ಧಾರವನ್ನು ಬಿಜೆಪಿ ಖಂಡಿಸುತ್ತದೆ. ವಿಧಾನ ಸಭಾಧ್ಯಕ್ಷರು ತಮ್ಮ ತೀರ್ಮಾನವನ್ನು ಮರು ಪರಿಶೀಲಿಸಿ ಅಮಾನತು ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಮತ್ತೊಮ್ಮೆ ತುಷ್ಟೀಕರಣದ ತನ್ನ ಹಳೇ ಚಾಳಿಯನ್ನು ಮುಂದುವರೆಸಿದೆ. ಸರ್ಕಾರಿ ಕಾಮಗಾರಿಗಳಲ್ಲಿ ಶೇ ೪ರಷ್ಟು ಮೀಸಲಾತಿ ಮುಸ್ಲಿಂರಿಗೆ ನೀಡುವುದು, ಹೊರದೇಶಕ್ಕೆ ವಿದ್ಯಾಭ್ಯಾಸಕ್ಕೆ ಹೋಗುವ ಮುಸ್ಲಿಂ ವಿದ್ಯಾರ್ಥಿಗಳಿಗೆ ನೀಡುವ ಸಹಾಯಧನವನ್ನು ೨೦ ಲಕ್ಷ ರೂ.ಗಳಿಂದ ೩೦ ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಿರುವುದು, ಶಾದಿ ಭಾಗ್ಯಕ್ಕೆ ಹಣ ನೀಡುವ ನಿರ್ಧಾರ ತೆಗೆದುಕೊಂಡಿರುವುದು ಮತ್ತು ಮುಸ್ಲಿಂ ಹೆಣ್ಣುಮಕ್ಕಳಿಗೆ ಮಾತ್ರ ಆತ್ಮರಕ್ಷಣೆಗಾಗಿ ವಿಶೇಷ ಅನುದಾನವನ್ನು ನೀಡುವುದು, ಕಾಂಗ್ರೆಸ್‌ನ ತುಷ್ಟೀಕರಣದ ರಾಜಕಾರಣದ ಮುಂದುವರೆದ ಭಾಗವಾಗಿದೆ. ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಬಿಜೆಪಿ ಜಿ¯್ಲÁ ಘಟಕವು ತೀವ್ರವಾಗಿ ವಿರೋಽಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ಎಸ್ಸಿ ಎಸ್ಪಿ ಸಮುದಾಯಗಳಿಗೆ ಮೀಸಲಿಟ್ಟ ಎಸ್ಸಿಪಿ ಟಿಎಸ್ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವುದು ಅತ್ಯಂತ ಖಂಡನೀಯ. ಕಳೆದ ೩ ವರ್ಷಗಳಲ್ಲಿ ಸುಮಾರು ೩೯ ಸಾವಿರ ಕೋಟಿ ಹಣವನ್ನು ಬೇರೆ ಉದ್ದೇಶಕ್ಕೆ ಪರಿಶಿಷ್ಟ ಜÁತಿ- ಪಂಗಡಗಳ ಸಮುದಾಯದ ಜನರಿಗೆ ತೀವ್ರ ಅನ್ಯಾಯವಾಗಿದೆ. ಮುಂದೆ ಈ ಮೊತ್ತವನ್ನು ಅನ್ಯ ಉದ್ದೇಶಗಳಿಗೆ ಬಳಸಬಾರದು ಮತ್ತು ಈಗಾಗಲೇ ಬಳಸಿದ ಮೊತ್ತವನ್ನು ಮತ್ತೆ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೇ ಬಳಸಬೇಕೆಂದು ಒತ್ತಾಯಿಸುತ್ತೇವೆ. ಈ ರೀತಿ ಮೀಸಲಿಟ್ಟ ಹಣವನ್ನು ಪರಿಶಿಷ್ಟ ಸಮುದಾಯದ ಕಲ್ಯಾಣಕ್ಕೆ ಮಾತ್ರ ನೀಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿ¯್ಲÁ ಅಧ್ಯಕ್ಷ ವೀರನಗೌಡ ಪಾಟೀಲï ಲೆಕ್ಕಿಹಾಳ, ನಗರ ಶಾಸಕ ಡಾ.ಶಿವರಾಜï ಪಾಟೀಲï, ಮಾಜಿ ಎಂಎಲ್ಸಿ ಎನ್.ಶಂಕ್ರಪ್ಪ, ಮಾಜಿ ಸಂಸದ ಬಿ.ವಿ.ನಾಯಕ, ಮಾಜಿ ಶಾಸಕರಾದ ಗಂಗಾಧರ್ ನಾಯಕ, ಜಿ¯್ಲÁ ಪ್ರದಾನ ಕಾರ್ಯದರ್ಶಿಗಳಾದ ಶಂಕರ ರೆಡ್ಡಿ, ಸಂತೋಷ ರಾಜಗುರು, ರವೀಂದ್ರ ಜÁಲ್ದಾರ್, ರಾಜಕುಮಾರ, ಕಡಗೋಲï ಆಂಜನೇಯ, ಮಂಡಲ ಅಧ್ಯಕ್ಷರಾದ ರಾಘವೇಂದ್ರ ಊಟಕೂರು, ಶಂಕರಗೌಡ ಮಿಜÁðಪುರು, ಸುಧಾಕರ್, ಶಿವಕುಮಾರ್, ಬಾಬುರಾವ್, ಪಿ .ಯಲ್ಲಪ್ಪ, ವಿನಯಕುಮಾರï, ರಾಮಚಂದ್ರ ಕಡುಗೋಲು ಸೇರಿ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net