ವಾರದಲ್ಲಿ ಸರ್ಕಾರಕ್ಕೆ ಬೆಳೆ ಹಾನಿ ವರದಿ

web 3
Published on

ಬಣಕಲ್: ಅಕಾಲಿಕ ಮಳೆಯಿಂದ ಉಂಟಾಗಿರುವ ಬೆಳೆ ಹಾನಿ ವರದಿಯನ್ನು ವಾರದೊಳಗೆ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಹೇಳಿದರು.

ಮೂಡಿಗೆರೆ ತಾಲೂಕಿನ ಲೋಕವಳ್ಳಿ, ಮುಗ್ರಹಳ್ಳಿ, ಬೆಟ್ಟಗೆರೆ, ಫಲ್ಗುಣಿ, ಅತ್ತಿಗೆರೆ ಗ್ರಾಮಗಳಿಗೆ ಸೋಮವಾರ ಭೇಟಿ ನೀಡಿ ಬೆಳೆಹಾನಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ತಾಲೂಕಿನಲ್ಲಿ ಕಾಫಿ ಬೆಳೆ ಹಾನಿ ಸಮೀಕ್ಷೆಗೆ ಕಾಫಿ ಮಂಡಳಿಯಿಂದ 5 ತಂಡ ರಚಿಸಲಾಗಿದ್ದು, ಈಗಾಗಲೇ ಸಮೀಕ್ಷೆ ಆರಂಭಿಸಲಾಗಿದೆ. ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಅಡಕೆ, ಭತ್ತ ಹಾಗೂ ಇತರ ಬೆಳೆ ಹಾನಿ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದಾರೆ. ವಾರದೊಳಗೆ ಸಮೀಕ್ಷೆ ಪೂರ್ಣಗೊಳಿಸಿ ಹಾನಿಯ ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.

ಅಕಾಲಿಕ ಮಳೆಗೆ ಕಾಫಿ ಗಿಡಗಳಲ್ಲಿ ಹೂ ಅರಳಿ ಹಣ್ಣುಗಳು ಉದುರಿವೆ. ಅತಿಯಾದ ಮಳೆಯಿಂದ ಕಾಫಿ ಹಣ್ಣುಗಳು ಹಾಳಾಗುತ್ತಿವೆ. ಕಾರ್ವಿುಕರ ಕೊರತೆಯಿಂದ ಗಿಡದಿಂದ ಉದುರಿದ ಕಾಫಿಯನ್ನು ರಕ್ಷಿಸಿಕೊಳ್ಳಲು ಸಮಸ್ಯೆಯಾಗಿದೆ. ಈ ಎಲ್ಲ ಅಂಶಗಳನ್ನು ಉಲ್ಲೇಖಿಸಿ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ತಹಸೀಲ್ದಾರ್ ರಮೇಶ್, ಕೃಷಿ ಅಧಿಕಾರಿ ವೆಂಕಟೇಶ್, ಕಾಫಿ ಮಂಡಳಿ ಹಿರಿಯ ಸಂಪರ್ಕ ಅಧಿಕಾರಿ ಶ್ರೀದೇವಿ, ರಾಜಸ್ವ ನಿರೀಕ್ಷಕ ಮಂಜುನಾಥ್, ಗ್ರಾಮ ಲೆಕ್ಕಾಧಿಕಾರಿಗಳಾದ ಆನಂದ್, ನಿತ್ಯಾ, ನಮಿತಾ, ರಮ್ಯ, ಉಮೇಶ್, ಗ್ರಾಮ ಸಹಾಯಕ ಅಣ್ಣಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net