ಜಿಲ್ಲಾಧಿಕಾರಿಯಿಂದ ಮುಖ್ಯ ಶಿಕ್ಷಕರಿಗೆ ಸನ್ಮಾನ

sanmana
Published on

ಕೊಕ್ಕರ್ಣೆ: ಬ್ರಹ್ಮಾವರ ವಲಯದ ಕೊಕ್ಕರ್ಣೆ ದುರ್ಗಾ ಆಂಗ್ಲ ಮಧ್ಯಮ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ವಲಯ, ಶ್ರೀರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬೈದೆಬೆಟ್ಟು ಸಹಯೋಗದಲ್ಲಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಾರ್ಯಕ್ರಮ ಸಂಘಟಿಸಿದ ಶ್ರೀರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಕೆ.ಶಾಂತಾರಾಜ ಶೆಟ್ಟಿ ದಂಪತಿಯನ್ನು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಗೌರವಿಸಿದರು.

ಕೊಕ್ಕರ್ಣೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯಂತ್ ಪೂಜಾರಿ, ಕಳ್ತೂರು ಗ್ರಾಪಂ ಅಧ್ಯಕ್ಷ ನವೀನ್ ಕುಮಾರ್, ಎಸ್‌ಡಿಎಂಸಿ ಅಧ್ಯಕ್ಷ ಸದಾಶಿವ ಪೂಜಾರಿ, ಶಾಲೆ ಸಂಚಾಲಕಿ ಸುಮತಿ ಶೆಟ್ಟಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಣಪತಿ ಕೆ., ಬ್ರಹ್ಮಾವರ ಬಿಇಒ ಶಬಾನ ಅಂಜುಂ, ವತ್ಸಲಾ ದಯಾನಂದ ಶೆಟ್ಟಿ, ಡಯಟ್ ಉಪಪ್ರಾಂಶುಪಾಲ ಡಾ.ಅಶೋಕ್ ಕಾಮತ್, ಸರ್ಕಾರಿ ನೌಕರರ ಸಂಘ ಜಿಲ್ಲಾಧ್ಯಕ್ಷ ದಿನಕರ ಶೆಟ್ಟಿ ಅಂಪಾರು, ಜಿಲ್ಲಾ ಪಂಚಾಯಿತಿ ನಿಕಟಪೂರ್ವ ಸದಸ್ಯ ಪ್ರತಾಪ್ ಹೆಗ್ಡೆ ಮಾರಾಳಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಡಾ.ಸುನೀತಾ ಡಿ.ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net