

ಕೋಲಾರ: ರಾಜ್ಯ ಸರ್ಕಾರದ ಎರಡು ವರ್ಷಗಳ ಅಭಿವೃದ್ಧಿ ಸಾಧನೆ ಹಾಗೂ ಪಂಚ ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಎಂ.ಆರ್.ರವಿ ಚಾಲನೆ ನೀಡಿದರು.
ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಪಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಕುರಿತ ಮಾಹಿತಿಯುಳ್ಳ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ, ಸರ್ಕಾರದ ಸಾಧನೆ ಫಲಕಗಳನ್ನು ವೀಕ್ಷಿಸಿದರು.
ವಸ್ತು ಪ್ರದರ್ಶನ ಮಳಿಗೆಯಲ್ಲಿ ಅಳವಡಿಸಲಾದ ಗ್ಯಾರಂಟಿ ಸಮರ್ಪಣೆ ಅಭಿವೃದ್ಧಿಯ ಸಂಕಲ್ಪ, ನಾಡಿನ ಏಳು ಕೋಟಿ ಜನರ ಬೆಳಕು ಗ್ಯಾರಂಟಿ ಬದುಕು ಫಲಕ, ಸರ್ಕಾರದ ಯೋಜನೆಗಳಾದ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಪ್ರಯಾಣಿಸಲು ಶಕ್ತಿ ಯೋಜನೆ, ಬಡ, ಹಿಂದುಳಿದ ಸೇರಿ ಎಲ್ಲ ಮಹಿಳೆಯರು ಸ್ವಾವಲಂಬಿ ಬದುಕು ನಡೆಸಲು ಎಲ್ಲ ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು ರೂ.2000 ಹಣ ನೀಡುವ ಗೃಹಲಕ್ಷಿ$್ಮ ಯೋಜನೆ, ಹಸಿವುಮುಕ್ತ ಕರ್ನಾಟಕದತ್ತ ದಾಪುಗಾಲಿಡುತ್ತಿರುವ ಅನ್ನಭಾಗ್ಯ, ಪದವಿ, ಡಿಪ್ಲೊಮಾ ಪೂರ್ಣಗೊಳಿಸಿದ ಯುವ ಜನತೆಗೆ ಉದ್ಯೋಗ ಪಡೆಯಲು ಅನುಕೂಲವಾಗಲು ಪ್ರತಿ ತಿಂಗಳು ಪದವೀಧರರಿಗೆ 3000 ರೂ.ಹಾಗೂ ಡಿಪ್ಲೊಮೊ ಪದವಿದರರಿಗೆ 1500 ರೂ.ನೀಡುವ ಯುವನಿಧಿ, ಪ್ರತಿ ಮನೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ, ಈ ಯೋಜನೆಗಳು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಜಾರಿಗೊಂಡಿದ್ದು, ಜನಸಾಮಾನ್ಯರ ಬದುಕಿಗೆ ಆಸರೆಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳು ಸೇರಿ ಸರ್ಕಾರದ ವಿವಿಧ ಯೋಜನೆಗಳನ್ನೊಳಗೊಂಡ ಸಮಗ್ರ ಮಾಹಿತಿಯುಳ್ಳ ಫಲಕಗಳನ್ನು ಹಸಿವು ನೀಗಿಸುವ ಇಂದಿರಾ ಕ್ಯಾಂಟಿನ್ ಫಲಕಗಳನ್ನು ಜಿಲ್ಲಾಧಿಕಾರಿಗಳು, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷರು ಸೇರಿ ಗಣ್ಯರು ವೀಕ್ಷಿಸಿದರು.
ಜು.6 ರಿಂದ 8 ರವರೆಗೆ ವಸ್ತುಪ್ರದರ್ಶನವು ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರುತ್ತದೆ.
ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳ ಲಾಭ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ದೊರಕಿಸುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳು ಒಳಗೊಂಡಂತೆ ಸರ್ಕಾರದ ಜನಪರ ಯೋಜನೆಗಳ, ಅಭಿವೃದ್ಧಿ ಸಾಧನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
- ಮಂಜೇಶ್
ವಾರ್ತಾ ಇಲಾಖೆಯ ಸಹಾಯಕ