ಕಾಮಗಾರಿಗಳಲ್ಲಿ ಲೋಪದೋಷವಾಗದಂತೆ ಎಚ್ಚರ ವಹಿಸಿ

bkt-28-1
ಹುನಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅಮರೇಶ್ ನಾಯಕ, ಯೋಜನಾ ನಿರ್ದೇಶಕರು ಎನ್.ವೈ. ಬಸರಿಗಿಡದ , ಜಿಪಂ ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ, ಗ್ರಾಮಿಣ ಕುಡಿಯುವ ನೀರು ಸರಬರಾಜು ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ರಾಘವೇಂದ್ರ ಪುರೋಹಿತ ಇದ್ದರು.
Published on

ಬಾಗಲಕೋಟೆ: ಹುನಗುಂದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹುನಗುಂದ ಹಾಗೂ ಇಳಕಲ್ಲ ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಕಾಮಗಾರಿಗಳಲ್ಲಿ ಲೋಪದೋಷವಾಗದಂತೆ ಎಚ್ಚರಿಕೆ ವಹಿಸಿ ಎಂದು ಅಽಕಾರಿಗಳಿಗೆ ಸೂಚನೆ ನೀಡಿದರು.

ಕುಡಿಯುವ ನೀರು, ಜಲ ಜೀವನ ಮಿಷನ್, ಬರ ನಿರ್ವಹಣೆ ಹಾಗೂ ನರೇಗಾ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಬಳಿಕ ಇಳಕಲ್ಲ ತಾಲೂಕಿನ ಹಿರೇಕೂಡಗಲಿ ಗ್ರಾಮಕ್ಕೆ ಭೇಟಿ ನೀಡಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಲ ಜೀವನ ಮಿಷನ್ ಸೇರಿದಂತೆ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಜೊತೆಗೆ ಹುನಗುಂದ ತಾಲೂಕು ಆಸ್ಪತ್ರೆಗೆ ಹಾಗೂ ಹಾಸ್ಟೆಲ್‌ಗಳಿಗೆ ಗುಣಮಟ್ಟ ಕಾಪಾಡಿಕೊಳ್ಳಲು ಸೂಚಿಸಿದರು.
ಈ ಸಂದರ್ಭದಲ್ಲಿ ವಿಭಾಗ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿಗಳು, ಯೋಜನಾ ನಿರ್ದೇಶಕರು, ಸಹಾಯಕ ಯೋಜನಾಧಿಕಾರಿಗಳು, ಕಾರ್ಯನಿರ್ವಾಹಕ ಅಽಕಾರಿಗಳು, ಸಹಾಯಕ ನಿರ್ದೇಶಕರು, ತಾಲೂಕು ಮಟ್ಟದ ಅಧಿಕಾರಿಗಳು, ತಾಲೂಕು ಪಂಚಾಯಿತಿ ಸಿಬ್ಬಂದಿ ವರ್ಗ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ತಹಸೀಲ್ದಾರ್ ಕಚೇರಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ವಿವಿಧ ಕಾಮಗಾರಿ ಪರಿಶೀಲಿಸಿದ ಸಿಇಒ
ಇಳಕಲ್ಲ ತಾಲೂಕಿನ ಗೂಡೂರ ಎಸ್.ಕೆ ಗ್ರಾಮಕ್ಕೆ ಭೇಟಿ ನೀಡಿ ಅಮೃತ ಸರೋವರ ಕಾಮಗಾರಿ ಹರ್ ಘರ್ ಜಲ ಕಾಮಗಾರಿಯ ಪರಿಶೀಲನೆ ನಡೆಸಿದರು. ಬಳಿಕ ಗೂಗಲಮರಿ ಗ್ರಾಮಕ್ಕೆ ಭೇಟಿ ನೀಡಿ ಜಲ ಜೀವನ ಮಿಷನ್ ಕಾಮಗಾರಿ ಪ್ರಗತಿಯ ಹಂತ ಪರಿಶೀಲಿಸಿ ಗುಣಮಟ್ಟ ಕಾಪಾಡಲು ಸೂಚಿಸಿದರು. ಹುನಗುಂದ ತಾಲೂಕು ಆಸ್ಪತ್ರೆಗೆ ಹಾಗೂ ಹಿಂದುಳಿದ ವರ್ಗಗಳ ಹಾಸ್ಟೆಲ್ ಗಳಿಗೆ ಭೇಟಿ ನೀಡಿ ಗುಣಮಟ್ಟ ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳಲು ಸೂಚಿಸಿದರು. ಜೊತೆಗೆ ಕುಡಿಯುವ ನೀರಿನ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅಮರೇಶ್ ನಾಯಕ, ಯೋಜನಾ ನಿರ್ದೇಶಕರು ಎನ್.ವೈ. ಬಸರಿಗಿಡದ , ಜಿಪಂ ಸಹಾಯಕ ಯೋಜನಾಽಕಾರಿ ಭೀಮಪ್ಪ ತಳವಾರ, ಗ್ರಾಮಿಣ ಕುಡಿಯುವ ನೀರು ಸರಬರಾಜು ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ರಾಘವೇಂದ್ರ ಪುರೋಹಿತ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಮುರಳಿ ದೇಶಪಾಂಡೆ, ಜಿಲ್ಲಾ ಐಇಸಿ ಸಂಯೋಜಕ ಅಜೇಯ ಸೂಳಿಕೇರಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net