ಲಕ್ಷ್ಮೇಶ್ವರ: ಪಟ್ಟಣದ ಹಳೇ ಬಸ್ ನಿಲ್ದಾಣದ ಹತ್ತಿರದ ತಾಪಂ ಸಭಾಂಗಣದಲ್ಲಿ ಫೆ.14ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿರುವರು. ಪಟ್ಟಣ ಸೇರಿ ಗ್ರಾಮೀಣ ಪ್ರದೇಶಗಳ ನಾಗರಿಕರು ತಮ್ಮ ಕುಂದು-ಕೊರತೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ತಹಸೀಲ್ದಾರ್ ವಾಸುದೇವಸ್ವಾಮಿ ತಿಳಿಸಿದ್ದಾರೆ.