

ರಾಯಚೂರು ಅಟಲ್‌ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿಯಲ್ಲಿ ರಾಜ್ಯದ ಸಾರ್ವಜನಿಕರಿಗೆ ವಿವಿಧ ಪ್ರಮಾಣ ಪತ್ರಗಳ ಸೇವೆಯನ್ನು ನೀಡಲು ಜಿಲ್ಲೆಯ ನಾಡ ಕಚೇರಿಗಳಲ್ಲಿ ಅರ್ಜಿಗಳ ವಿಲೇವಾರಿಯನ್ನು ವೇಗಗೊಳಿಸಿ ಸಾಧನೆ ಮಾಡಿರುವುದರಿಂದ ಜಿಲ್ಲಾಧಿಕಾರಿ ನಿತೀಶ್ ಕೆ. ಅವರಿಗೆ ಕಂದಾಯ ಇಲಾಖೆಯ ಆಯುಕ್ತ ಮುಲ್ಲೈ ಮುಹಿಲನ್ ಅವರು ಅಭಿನಂದನೆ ತಿಳಿಸಿದ್ದಾರೆ.
ಜಿಲ್ಲೆಯ ನಾಡ ಕಚೇರಿಗಳಲ್ಲಿ ಆಗಸ್ಟ್ ತಿಂಗಳಿನಲ್ಲಿ ಸ್ವೀಕರಿಸಲಾಗಿರುವ 33,870 ಅರ್ಜಿಗಳನ್ನು ನಿಗದಿತ ಅವಧಿಗಿಂತ ಮೊದಲೇ ಶೇ.99.90 ರಷ್ಟು ವಿಲೇವಾರಿ ಮಾಡಿ 6.18 ಸಿಗ್ಮಾ ಮೌಲ್ಯ ಪಡೆದು.
10.04 ವಿಲೇವಾರಿ ಸೂಚ್ಯಂಕದ ಪ್ರಕಾರ ತಮ್ಮ ಜಿಲ್ಲೆಯಲ್ಲಿ 11.04 ಪಟ್ಟು ನಿಗಧಿತ ಅವಧಿಗಿಂತ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ ಜಿಲ್ಲೆಯು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುವುದು ಶ್ಲಾಘನೀಯವಾಗಿದೆಮದು ಜಿಲ್ಲಾಧಿಕಾರಿ ನಿತೀಶ್ ಕೆ., ಅವರಿಗೆ ಅಭಿನಂದನಾ ಪತ್ರ ನೀಡಿದ್ದಾರೆ.