ಬಾಲ್ಯ ವಿವಾಹ ತಡೆಗೆ ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

District Collector orders strict action to prevent child marriage
ಜಿಲ್ಲಾಧಿಕಾರಿ ಟಿ. ಭೂಬಾಲನ್
Published on

ವಿಜಯಪುರ: ವಿಜಯಪುರ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಏ. 30ರ ಅಕ್ಷಯ ತೃತೀಯ ದಿನದಂದು ಜಿಲ್ಲೆಯಲ್ಲಿ ಸಾಮೂಹಿಕ ವಿವಾಹಗಳು ಹಾಗೂ ವೈಯಕ್ತಿಕ ವಿವಾಹಗಳು ಹೆಚ್ಚಾಗಿ ಆಯೋಜನೆಯಾಗುವ ಸಂಭವವಿದ್ದು, ಈ ಸಂದರ್ಭ ಅಪ್ರಾಪ್ತ ವಯಸ್ಸಿನವರ ವಿವಾಹಗಳು ನಡೆಯುವ ಸಾಧ್ಯತೆ ಇದೆ. ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಮತ್ತು ಕರ್ನಾಟಕ ತಿದ್ದುಪಡಿ ಕಾಯ್ದೆ-2016ರ ಸೆಕ್ಷನ್ 13(4)ರಂತೆ ವಿವಾಹಗಳನ್ನು ತಡೆಯುವ ಅಧಿಕಾರವಿರುವುದರಿಂದ ಜಿಲ್ಲಾ, ತಾಲೂಕು, ವಾರ್ಡ್ ಹಾಗೂ ಗ್ರಾಪಂ ಮಟ್ಟದಲ್ಲಿ ಬಾಲ್ಯ ವಿವಾಹ ನಿಷೇಧಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬಾಲ್ಯವಿವಾಹ ನಡೆಯದಂತೆ ನಿಗಾವಹಿಸುವಂತೆ ಅವರು ಸೂಚಿಸಿದ್ದಾರೆ.

ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು. ಬಾಲ್ಯವಿವಾಹ ನಡೆಯುವ ಮಾಹಿತಿ ಲಭಿಸಿದರೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅಥವಾ 112ಗೆ ಕರೆ ಮಾಡಿ ದೂರು ನೀಡಿದಲ್ಲಿ ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಟ್ಟು ಬಾಲ್ಯ ವಿವಾಹ ತಡೆಗಟ್ಟಲು ಕ್ರಮ ವಹಿಸಲಾಗುವುದು ತಿಳಿಸಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net