ವಿವಿಧೆಡೆ ಜಿಲ್ಲಾಧಿಕಾರಿ ಟಿ. ಭೂಬಾಲನ್​ ಭೇಟಿ

District Collector T. Bhubalan visits various places
ತಾಳಿಕೋಟೆ ಪಟ್ಟಣದಲ್ಲಿ ಪ್ರಜಾಸೌಧ ಕಟ್ಟಡ ನಿರ್ಮಿಸಲು ಉದ್ದೇಶಿಸಿದ ಸ್ಥಳವನ್ನು ಜಿಲ್ಲಾಧಿಕಾರಿ ಟಿ. ಭೂಬಾಲನ್​ ಪರಿಶೀಲನೆ ನಡೆಸಿದರು. ತಹಸೀಲ್ದಾರ್​ ಕೀರ್ತಿ ಚಾಲಕ, ಬದ್ರೂದ್ದೀನ್​ ಸೌದಾಗರ, ಗುರುನಾಥ ದಡ್ಡೆ ಮತ್ತಿತರರಿದ್ದಾರೆ.
Published on

ವಿಜಯಪುರ: ಜಿಲ್ಲೆಯ ನಿಡಗುಂದಿ, ಮುದ್ದೇಬಿಹಾಳ, ತಾಳಿಕೋಟೆ ಹಾಗೂ ಬಸವನಬಾಗೇವಾಡಿ ತಾಲೂಕಿಗೆ ಬುಧವಾರ ಜಿಲ್ಲಾಧಿಕಾರಿ ಟಿ. ಭೂಬಾಲನ್​ ಭೇಟಿ ನೀಡಿ ವಿವಿಧ ಕಾಮಗಾರಿ ಪರಿಶೀಲಿಸಿದರು.

ನಿಡಗುಂದಿಯ ಪ.ಪಂ. ಹಾಗೂ ಹೆಬ್ಬಾಳ ಗ್ರಾ.ಪಂ. ವ್ಯಾಪ್ತಿಯ ನತ್ಯಾಜ್ಯ ವಿಲೇವಾರಿ ಟಕ ಸ್ಥಳ ಪರೀವೀಕ್ಷಿಸಿ, ನಿಡಗುಂದಿ ಪಟ್ಟಣದಲ್ಲಿ ಮೆಘಾ ಮಾರುಕಟ್ಟೆ ನಿರ್ಮಾಣಕ್ಕಾಗಿ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ನಿಡಗುಂದಿಯಲ್ಲಿನ ಇಂದಿರಾ ಕ್ಯಾಂಟೀನ್​ಗೆ ಭೇಟಿ ಕೊಟ್ಟು, ಕ್ಯಾಂಟೀನ್​ ಕಾಮಗಾರಿ ಹಾಗೂ ಮೂಲ ಸೌಕರ್ಯಗಳನ್ನು ವೀಕ್ಷಿಸಿದರು. ಅಲ್ಲದೆ, ತ್ವರಿತವಾಗಿ ಕ್ಯಾಂಟೀನ್​ ಉದ್ಘಾಟನೆಗೆ ಸಿದ್ಧತೆ ಕೈಗೊಳ್ಳುವಂತೆ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.

ನಿಡಗುಂದಿಯ ಒಳಚರಂಡಿ ನೀರು ಶುದ್ಧೀಕರಣ ಟಕದ ಮಂಜೂರಾತಿಗಾಗಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಕೂಡಲೇ ಸ್ಥಳ ವೀಕ್ಷಣೆ ಮಾಡಿ, ನಿರಾೇಪಣಾ ಪತ್ರ ಒದಗಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಮುದ್ದೇಬಿಹಾಳದಲ್ಲಿನ ಇಂದಿರಾ ಕ್ಯಾಂಟೀನ್​ ಕಟ್ಟಡಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಕಟ್ಟಡದ ಸುತ್ತಮುತ್ತ ತಡೆಗೋಡೆ, ಫ್ಲೋರಿಂಗ್​ ಕಾರ್ಯಕ್ಕೆ ಸೂಚಿಸಿದರು. ಬಳಿಕ ಪಟ್ಟಣದಲ್ಲಿರುವ ಕೆರೆ ವೀಕ್ಷಿಸಿ ಆ ಪ್ರದೇಶದಲ್ಲಿರುವ ಗಿಡಗಂಟಿಗಳನ್ನು ತೆರವುಗೊಳಿಸಿ ಸ್ವಚ್ಛತೆ ಕಾಪಾಡಬೇಕು. ಕೆರೆಯಲ್ಲಿ ಕಲುಷಿತ ನೀರು ಸೇರದಂತೆ ಎಚ್ಚರಿಕೆ ವಹಿಸಲು ತಿಳಿಸಿದರು.

ಮುದ್ದೇಬಿಹಾಳದಲ್ಲಿ ಮೆಘಾ ಮಾರುಕಟ್ಟೆ ಸ್ಥಾಪನೆಗೆ ಸ್ಥಳ ಪರಿಶೀಲನೆ ನಡೆಸಿ, ಅಂದಾಜು ಪತ್ರಿಕೆ ಹಾಗೂ ನೀಲಿನೆ ಪರಿಶೀಲಿಸಿ, ಕೂಡಲೇ ಕಾಮಗಾರಿ ಆರಂಭಿಸಲು ಸಂಬಂಧಿಸಿದ ಗುತ್ತಿಗೆದಾರರಿಗೆ ತಿಳಿಸಿದರು. ನಂತರ ತಹಸೀಲ್ದಾರ್​ ತೆರಳಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಪ್ರಗತಿ ಪರಿಶೀಲಿಸಿದರು.

ಅಲ್ಲಿಂದ ತಾಳಿಕೋಟೆಗೆ ತೆರಳಿ ಗ್ರಂಥಾಲಯ ಕಟ್ಟಡ ನಿರ್ಮಾಣದ ಕಾಮಗಾರಿ, ಪ್ರಜಾಸೌಧ ಕಟ್ಟಡ ಸಲುವಾಗಿ ತಾಳಿಕೋಟೆಯಲ್ಲಿ ರಿ.ಸ.ನಂ. 623 ಹಾಗೂ 255 ಸ್ಥಳ ಪರಿಶೀಲಿಸಿದರು. ತಾಲೂಕು ಕಚೇರಿಗೆ ಭೇಟಿ ನೀಡಿ, ಕಚೇರಿಯ ಕಾರ್ಯವೈಖರಿ ಕುರಿತು ಪರಿಶೀಲಿಸಿದ ಬಳಿಕ ಕಸವಿಲೇವಾರಿ ಟಕ, ಸಮುದಾಯ ಶೌಚಗೃಹ ನಿರ್ಮಾಣ ಕಾಮಗಾರಿ ಸ್ಥಳಕ್ಕ್ಕೆ ಭೇಟಿ ಕೊಟ್ಟರು.

ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ನಗರಾಭಿವೃದ್ದಿಕೋಶದ ಯೋಜನಾ ನಿರ್ದೇಶಕ ಬದ್ರೂದ್ದೀನ್​ ಸೌದಾಗರ, ನಿಡಗುಂದಿ ಮುಖ್ಯಾಧಿಕಾರಿ ವಿರೇಶ ಹಟ್ಟಿ, ಮುದ್ದೇಬಿಹಾಳ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ತಾಳಿಕೋಟೆ ಮುಖ್ಯಾಧಿಕಾರಿ ಮೋಹನ ಜಾಧವ, ತಾಳಿಕೋಟೆ ತಹಸೀಲ್ದಾರ ಕೀರ್ತಿ ಚಾಲಕ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net