ಗಾಂಧಿ ಮೈದಾನಕ್ಕೆ ಜಿಲ್ಲಾಧಿಕಾರಿ ಭೇಟಿ

bmr
Published on

ಬ್ರಹ್ಮಾವರ: ಭಾರಿ ಮಳೆಗೆ ಕುಸಿದ ಬ್ರಹ್ಮಾವರದ ಗಾಂಧಿ ಮೈದಾನದ ಆವರಣಗೋಡೆ ಹಾಗೂ ಅಸಮರ್ಪಕ ಚರಂಡಿ ವ್ಯವಸ್ಥೆಗಳಿರುವ ಪ್ರದೇಶಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಭೇಟಿ ನೀಡಿ ಪರಿಶೀಲಿಸಿದರು. ಚರಂಡಿ ವ್ಯವಸ್ಥೆ ಸರಿಪಡಿಸಲು ಹಾಗೂ ಕ್ರೀಡಾಂಗಣದ ಆವರಣಗೋಡೆ ದುರಸ್ತಿಗೆ ಅಧಿಕಾರಿಗಳಿಗೆ ಸೂಚಿಸಿದರು.

ಬ್ರಹ್ಮಾವರ ತಹಸೀಲ್ದಾರ್ ಶ್ರೀಕಾಂತ್ ಹೆಗ್ಡೆ, ತಾಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಎಚ್.ವಿ.ಇಬ್ರಾಹಿಂಪುರ, ನಿರ್ಮಿತಿ ಕೇಂದ್ರದ ಇಂಜಿನಿಯರ್ ವಿಜಯಕುಮಾರ್ ಶೆಟ್ಟಿ, ಕಂದಾಯ ನೀರೀಕ್ಷಕ ರಾಜು, ಗ್ರಾಮ ಆಡಳಿತಾಧಿಕಾರಿ ಮಹೇಂದ್ರ ಆಚಾರ್ಯ, ಹಂದಾಡಿ ಪಿಡಿಒ ಆದರ್ಶ ಶೆಟ್ಟಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net