

ಸುಬ್ರಹ್ಮಣ್ಯ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಕುಟುಂಬ ಸಮೇತ ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ದೇವರ ದರ್ಶನಗೈದರು.
ಜಿಲ್ಲಾಧಿಕಾರಿ, ಅವರ ಪತ್ನಿ ಮತ್ತು ಪುತ್ರ ಜತೆಯಾಗಿ ಕಲ್ಲು ಸಕ್ಕರೆಯಲ್ಲಿ ತುಲಾಭಾರ ಸೇವೆ ಸಲ್ಲಿಸಿದರು. ಕ್ಷೇತ್ರ ಪುರೋಹಿತ ಮಧುಸೂದನ ಕಲ್ಲೂರಾಯರು ವೈದಿಕ ವಿಧಿವಿಧಾನ ನೆರವೇರಿಸಿದರು. ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯರು ಮಹಾಪ್ರಸಾದ ವಿತರಿಸಿದರು. ಬಳಿಕ ಶ್ರೀ ದೇವರ ಭೋಜನ ಪ್ರಸಾದ ಸ್ವೀಕರಿಸಿದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಎಸ್.ಇಂಜಾಡಿ, ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಎಇಒ ಯೇಸುರಾಜ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ಲೀಲಾ ಮನಮೋಹನ್, ಪ್ರವೀಣ ರೈ ಮರುವಂಜ, ಸೌಮ್ಯಾ ಭರತ್, ಶಿಷ್ಟಾಚಾರಾಧಿಕಾರಿ ಜಯರಾಮ ರಾವ್, ಕಚೇರಿ ಅಧೀಕ್ಷಕ ಕೆ.ಎಂ.ಗೋಪಿನಾಥ್ ನಂಬೀಶ ಮತ್ತಿತರರು ಉಪಸ್ಥಿತರಿದ್ದರು.