

ಮಂಡ್ಯ: ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಆ.9ರಂದು ಜನಾಂದೋಲನ ಸಮಾವೇಶ ಆಯೋಜಿಸಲಾಗಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಎಂ.ಎಲ್.ಸುರೇಶ್ ಮನವಿ ಮಾಡಿದರು.
ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ನಡೆಸುತ್ತಿರುವ ಪಾದಯಾತ್ರೆಯನ್ನು ಖಂಡಿಸುತ್ತೇವೆ. ಈ ಎರಡು ಪಕ್ಷಗಳು ಅಧಿಕಾರದಲ್ಲಿ ಇದ್ದಾಗ ಸರ್ಕಾರದ ಹಣವನ್ನು ಲೂಟಿ ಮಾಡಿದ್ದಾರೆ. ಆದರಿಂದು ಭ್ರಷ್ಟಾಚಾರದ ಯಾತ್ರೆ ಮಾಡುತ್ತಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಸುಳ್ಳು ಹಗರಣಗಳನ್ನು ಹೇಳಿಕೊಂಡು ರಾಜ್ಯದ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ವಾಲ್ಮೀಕಿ ನಿಗಮ ಹಾಗೂ ಮುಡಾದ ಬಗ್ಗೆ ಸುಳ್ಳಿನ ಮಾಹಿತಿ ಹಬ್ಬಿಸಿಕೊಂಡು ಸಿದ್ದರಾಮಯ್ಯ ಅವರನ್ನು ತೇಜೋವಧೆ ಮಾಡಲು ಹೊರಟಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಜನರಿಗೆ ಸತ್ಯವನ್ನು ಹೇಳಲು ಜನಾಂದೋಲನ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.
ನಗರಸಭೆ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮೀ ರಘುನಂದನ್, ಮುಖಂಡರಾದ ಸುಂಡಹಳ್ಳಿ ಮಂಜುನಾಥ್, ವೆಂಕಟೇಶ್, ಮಹೇಶ್, ಅಮ್ಜದ್ ಪಾಷಾ, ರಾಜು ಹಾಜರಿದ್ದರು.