

ಮಂಡ್ಯ: ಹಾಸನದಲ್ಲಿ ಡಿ.5ರಂದು ಆಯೋಜಿಸಿದ್ದ ಸ್ವಾಭಿಮಾನಿ ಸಮಾವೇಶದ ಯಶಸ್ಸಿಗೆ ಕಾರಣರಾದ ಮುಖಂಡರು, ಕಾರ್ಯಕರ್ತರು, ಜನತೆಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಂ.ಎಲ್.ಸುರೇಶ್ ತಿಳಿಸಿದರು.
ಸಮಾವೇಶದಲ್ಲಿ ಮಂಡ್ಯ, ಮೈಸೂರು, ಹಾಸನ, ಕೊಡಗು, ಚಾಮರಾಜನಗರ ಹಾಗೂ ಚಿಕ್ಕಮಗಳೂರು ಜಿಲ್ಲೆಯಿಂದ ಲಕ್ಷಾಂತರ ಜನರು ಭಾಗವಹಿಸಿದ್ದು, ಇದು ಹಾಸನ ಇತಿಹಾಸದಲ್ಲಿ ಅಭೂತಪೂರ್ವ ಸಮಾವೇಶ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಡಿ.20, 21 ಮತ್ತು 22ರಂದು ಮಂಡ್ಯ ನಗರದ ಹೊರವಲಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಕುರುಬರ ಸಂಘದ ಲೆಕ್ಕ ಪರಿಶೋಧಕ ಮಹೇಶ್, ಕಾಂಗ್ರೆಸ್ ಮುಖಂಡ ವಿಜಿಕುಮಾರ್, ಅಲ್ಪ ಸಂಖ್ಯಾತ ಮುಖಂಡ ಅಮ್ಜದ್ ಪಾಷಾ, ಲಿಂಗರಾಜು, ಸುರೇಶ್ ಇದ್ದರು.