

ಸುಬ್ರಹ್ಮಣ್ಯ: ರೋಟರಿಯಿಂದ ಸವಾಜಮುಖಿ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆ. ಇದರೊಂದಿಗೆ ಸದಸ್ಯರ ಪ್ರತಿಭೆಯ ಅನಾವರಣಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೂಡಾ ಆಯೋಜನೆ ವಾಡಲಾಗುತ್ತಿದೆ. ಸವಾಜಮುಖಿ ಧೋರಣೆಯೊಂದಿಗೆ ಸುಪ್ತ ಪ್ರತಿಭೆ ಅನಾವರಣಕ್ಕೆ ಸಾಂಸ್ಕೃತಿಕ ಸ್ಪರ್ಧೆಗಳು ಅಡಿಗಲ್ಲಾಗಿದೆ ಎಂದು ರೋಟರಿ ಜಿಲ್ಲಾ ಸಹಾಯಕ ರಾಜ್ಯಪಾಲ ವಿಕ್ರಂದತ್ತ ಹೇಳಿದರು.
ಸುಬ್ರಹ್ಮಣ್ಯದ ಕುವಾರಸ್ವಾಮಿ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ರೋಟರಿ ಜಿಲ್ಲೆ 3181ನ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಕುವಾರ ಕಲಾ ವೈಭವವನ್ನು ಉದ್ಘಾಟಿಸಿ ವಾತನಾಡಿದರು.
ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ನಾಯರ್ ವಹಿಸಿದ್ದರು. ರೋಟರಿ ಡಿಜಿಎನ್ ಸತೀಶ್ ಬೋಳಾರ್, ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಸಂಚಾಲಕ ಸೀತಾರಾಮ ರೈ ಸವಣೂರು, ರೋಟರಿ ಜಿಲ್ಲಾ ಕಾರ್ಯದರ್ಶಿ ರಿತೇಶ್ ಬಾಳಿಗ, ಅಸಿಸ್ಟೆಂಟ್ ಗವರ್ನರ್ ವಿನಯ ಕುವಾರ್, ಜಿಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳ ಚೇರ್ಮನ್ ಸತೀಶ್, ವೈಸ್ ಚೇರ್ಮನ್ ಗೋಪಾಲ್ ಎಣ್ಣೆಮಜಲ್, ಇವೆಂಟ್ ಚೇರ್ಮನ್ ಬಾಲಕೃಷ್ಣ ಪೈ, ಜೋನಲ್ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ, ನಿಕಟಪೂರ್ವ ಅಧ್ಯಕ್ಷ ಪ್ರಶಾಂತ್ ಕೋಡಿಬೈಲ್, ಕಾರ್ಯದರ್ಶಿ ಚಿದಾನಂದ ಕುಳ ವೇದಿಕೆಯಲ್ಲಿದ್ದರು.
ರೋಟರಿ ಜಿಲ್ಲೆ 3181ರ 9 ವಲಯಗಳಲ್ಲಿ ವಿಜೇತರಾದ ಸ್ಪರ್ಧಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ರೋಟರಿಯ ಪುರುಷ, ಮಹಿಳೆಯರಿಗೆ ಹಾಗೂ ಮಕ್ಕಳಿಗೆ ವಿವಿಧ ಸ್ಪರ್ಧೆಗಳು ನಡೆದವು. ಪೂರ್ವ ಜಿಲ್ಲಾ ಸಹಾಯಕ ಗವರ್ನರ್ ರಾಮಕೃಷ್ಣ ಮಲ್ಲಾರ ನಿರೂಪಿಸಿದರು.