

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲೆಯಲ್ಲಿ ನಾಗರಿಕ ಸುರಕ್ಷತೆ, ಶಾಂತಿ, ಸುವ್ಯವಸ್ಥೆ ಕಾಪಾಡಲು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸೂಚಿಸಿದ್ದಾರೆ. ಅವರ ನಿರ್ದೇಶನದಂತೆ ವಿವಿಧ ಇಲಾಖೆಗಳ ಅಽಕಾರಿಗಳ ಸಮನ್ವಯಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಯಾವುದೇ ರೀತಿಯ ಭಯ, ಅನಗತ್ಯ ಬೆಲೆ ಹೆಚ್ಚಳ, ಕೃತಕ ಅಭಾವ ಸೃಷ್ಟಿಯಾಗದಂತೆ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು.
ಪೊಲೀಸ್ ಅಧಿಕಾರಿಗಳು ಜನನಿಬಿಡ ಪ್ರದೇಶಗಳು, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ಕೈಗೊಂಡಿರುವ ಸುರಕ್ಷತಾ ಕ್ರಮಗಳನ್ನು ಖಾತರಿಸಿಕೊಳ್ಳಬೇಕು. ಅಗತ್ಯವಿದ್ದರೆ ಭದ್ರತೆ ನೀಡಬೇಕು. ಆಹಾರ ಉತ್ಪನ್ನಗಳ ಬೆಲೆ ಹೆಚ್ಚಳ, ಕೃತಕ ಅಭಾವ ಸೃಷ್ಟಿ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಅನಗತ್ಯವಾಗಿ ಆಹಾರ ಉತ್ಪನ್ನಗಳ ಸಂಗ್ರಹವಾಗದ0ತೆ, ಸಾರ್ವಜನಿಕರಲ್ಲಿ ಯಾವುದೇ ಗೊಂದಲಗಳು ಉಂಟಾಗದ0ತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.
ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಪೊಲೀಸ್ ಅಧೀಕ್ಷಕ ಡಾ. ಗೋಪಾಲ ಬ್ಯಾಕೋಡ ಮಾತನಾಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಭುವನೇಶ ಪಾಟೀಲ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ನಾರಾಯಣ ಬರಮಣಿ, ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ವೇದಿಕೆಯಲ್ಲಿದ್ದರು.
ಜಿಲ್ಲಾ ಮಟ್ಟದ ಅಽಕಾರಿಗಳು, ಆಯಿಲ್ ಕಂಪನಿಗಳು ಮತ್ತು ಕೈಗಾರಿಕೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.