ತ.ನಾಡಿಗೆ ನೀರು ಹರಿಸುತ್ತಿರುವುದಕ್ಕೆ ಖಂಡನೆ: 8ನೇ ದಿನ ಪೂರೈಸಿದ ಅನಿರ್ದಿಷ್ಟಾವಧಿ ಧರಣಿ

1 (1)
Published on

ಮಂಡ್ಯ: ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ರೈತರ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಗುರುವಾರ ಎಂಟನೇ ದಿನ ಪೂರೈಸಿತು. ಅಂತೆಯೇ ಹೋರಾಟ ಬೆಂಬಲಿಸಿ ವಿವಿಧ ಸಂಘಟನೆ ಪದಾಧಿಕಾರಿಗಳು ಭಾಗವಹಿಸಿದರು.

ಸರ್‌ಎಂವಿ ಪ್ರತಿಮೆ ಎದುರು ನಡೆಯುತ್ತಿರುವ ಧರಣಿಯಲ್ಲಿ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಸದಸ್ಯರು ಧರಣಿ ಮುಂದುವರಿಸಿದ್ದಾರೆ. ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಮುಂದೂಡಿದೆ. ರಾಜ್ಯ ಸರ್ಕಾರ ಸೆ.12ರಿಂದ ತಮಿಳುನಾಡಿಗೆ ನೀರು ಹರಿಸಲು ಸಾಧ್ಯ ಇಲ್ಲ ಎಂದು ಹೇಳಿದೆ. ಇಂತಹ ನೆಪ ಬಿಟ್ಟು ತಕ್ಷಣ ನೀರು ನಿಲ್ಲಿಸುವಂತೆ ಒತ್ತಾಯಿಸಿದರು.

ಸಮಿತಿಯ ಸುನಂದಾ ಜಯರಾಂ, ಮಾಜಿ ಎಂಎಲ್‌ಸಿ ಕೆ.ಟಿ.ಶ್ರೀಕಂಠೇಗೌಡ, ಮಾಜಿ ಶಾಸಕ ಜಿ.ಬಿ.ಶಿವಕುಮಾರ್, ಕೆ.ಬೋರಯ್ಯ, ರೈತ ಸಂಘದ ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net