

ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ
ಅಂಗವಿಕಲರಿಗೆ ಅನುಕೂಲ ಒದಗಿಸಲು ಹಲವು ಸೌಲಭ್ಯಗಳಿದ್ದು, ಅವುಗಳನ್ನು ಫಲಾನುಭವಿಗಳಿಗೆ ತಲುಪಿಸುವ ಕೆಲಸವಾಗಬೇಕು. ಲಾನುಭವಿಗಳು ಸೂಕ್ತ ಸಮಯಕ್ಕೆ ಅರ್ಜಿ ಹಾಕಿ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಅಂಗವಿಕಲರು ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ನಿರ್ದೇಶಕ ಎನ್.ಸಿದ್ದೇಶ್ವರ ಹೇಳಿದರು.
ನಗರದ ಹಳೇ ಆಸ್ಪತ್ರೆ ವೃತ್ತದಲ್ಲಿರುವ ಜಿಲ್ಲಾ ಅಂಗವಿಕಲರ ಪುರ್ನವಸತಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮಾತನಾಡಿದರು. ಅಂಗವಿಕಲ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಲಾಗುತ್ತಿದೆ. ತಾಯಂದಿರೂ ಕೂಡ ಈ ರೀತಿಯ ತರಬೇತಿ ಪಡೆದು ಮಕ್ಕಳ ಕಲಿಕೆಗೆ ನೆರವಾಗಬೇಕು ಎಂದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ್ ಮಾತನಾಡಿ, ಇಲಾಖೆಯ ಅನುದಾನದಲ್ಲಿ ನಡೆಯುತ್ತಿರುವ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ನೂತನವಾಗಿ ಸ್ಥಾಪನೆಯಾಗಿರುವ ಉಪ ಕೇಂದ್ರಗಳಿಂದ ಸಾಕಷ್ಟು ಫಲಾನುಭವಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಇದಕ್ಕೆ ಸರ್ಕಾರದ ಅನುದಾನದ ಜತೆಗೆ ಕೊರಿಯನ್ ಫೌಂಡೇಷನ್ ಮತ್ತು ಬೆಂಗಳೂರು ಬ್ಯಾಪ್ಟಿಸ್ಟ್ ಆಸ್ಪತ್ರೆ ಸಹಕಾರ ನೀಡಿರುವುದು ಉತ್ತಮ ಬೆಳವಣಿಗೆ ಎಂದರು.