ಜು.22, 23ರಂದು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಪ್ರವಾಸ

3
Published on

ಮಂಡ್ಯ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಜು.22 ಮತ್ತು 23ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

22ರಂದು ಬೆಳಗ್ಗೆ 9.30ಕ್ಕೆ ನಾಗಮಂಗಲದಲ್ಲಿ ಆಯೋಜಿಸಿರುವ ಬಿಜಿಎಸ್ ಕಾಲೇಜು ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗಿ, 11ಗಂಟೆಗೆ ಮದ್ದೂರು ಪಟ್ಟಣದ ಎಚ್.ಕೆ.ವೀರಣ್ಣಗೌಡ ಕಾಲೇಜಿನಲ್ಲಿ ಹಮ್ಮಿಕೊಂಡಿರುವ ಸನ್ಮಾನ ಸಮಾರಂಭದಲ್ಲಿ ಭಾಗಿ, 11.45ಕ್ಕೆ ಮಂಡ್ಯ ನಗರದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಆಯೋಜಿಸಿರುವ ಕಾರ್ಯಕ್ರಮ ಹಾಗೂ 12.30ಕ್ಕೆ ರೈತ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಳ್ಳಿದ್ದಾರೆ. 23ರಂದು ಬೆಳಗ್ಗೆ 9.30ರಿಂದ ಸಂಜೆ 4ಗಂಟೆಗೆ ನಾಗಮಂಗಲ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net