

ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಜಿಲ್ಲಾಮಟ್ಟದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಪೊಲೀಸ್ ಇಲಾಖೆಯಿಂದ ಆಯೋಜಿಸಲಾದ ವಿನೂತನ ಹೆಲ್ಮೆಟ್ ಜಾಗೃತಿ ಕಾರ್ಯಕ್ರದಲ್ಲಿ ಪಾಲ್ಗೊಂಡು ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದರ ಮೂಲಕ ಅಪಘಾತದ ವೇಳೆ ತಮಗೆ ಹಾಗೂ ತಮ್ಮ ಕುಟುಂಬಸ್ಥರಿಗೆ ಎದುರಾಗುವ ಸಂಕಷ್ಟದಿಂದ ಸುರಕ್ಷಿತವಾಗಿರಬಹುದು ಎಂದು ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ಸಚಿವ ಸತೀಶ ಜಾರಕಿಹೊಳಿ, ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕ ಆಸೀಫ್ ಸೇಠ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಪೊಲೀಸ್ ಸಿಬ್ಬಂದಿಗೆ ಒಂದು ಸಾವಿರ ಹೆಲ್ಮೆಟ್ ಗಳನ್ನು ವಿತರಿಸಿದರು.
ಈ ವೇಳೆ ಡಿಸಿಪಿ ರೋಹನ್ ಜಗದೀಶ್ ಅವರು ಹೆಲ್ಮೆಟ್ ಬಳಕೆಯ ಮಹತ್ವ ತಿಳಿಸಿದರು.