ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

f6f90582-5024-4ad2-ba69-1aff1f8aba6d
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್​ ಜ. 25ರಿಂದ 28ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಜು. 25ರಂದು ಬೆಳಗ್ಗೆ 11.30ಕ್ಕೆ ಹುಬ್ಬಳ್ಳಿ ವಾಸವಿ ಕಲ್ಯಾಣ ಮಂಟಪದಲ್ಲಿ ಹು-ಧಾ ಫೋಟೊಗ್ರಾಫರ್​, ವಿಡಿಯೋಗ್ರಾಫರ್ಸ್ ಅಸೋಸಿಯೇಷನ್​ ಆಯೋಜಿಸಿರುವ ಫೋಟೊ ಎಕ್ಸ್​ಪೋ ಮೇಳ ಉದ್ಘಾಟಿಸುವರು.

ಮಧ್ಯಾಹ್ನ 1 ಗಂಟೆಗೆ ಜಿ.ಬಸನಕೊಪ್ಪ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ರಸ್ತೆ ನಿರ್ಮಾಣ ಕಾಮಗಾರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್​ ಇಲಾಖೆಯಿಂದ ನೀರಸಾಗರ-ಡೊಂಬರಿಕೊಪ್ಪ ರಸ್ತೆ ನಿರ್ಮಾಣ ಕಾಮಗಾರಿ, ಸಣ್ಣ ನೀರಾವರಿ ಇಲಾಖೆಯಿಂದ ಜಿ.ಬಸನಕೊಪ್ಪ ನೀರಸಾಗರ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸುವರು. ಮಧ್ಯಾಹ್ನ 3 ಗಂಟೆಗೆ ಅಳ್ನಾವರದ ಸ್ಥಳಿಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. ಸಂಜೆ 6.30ಕ್ಕೆ ದೊಡ್ಡನಾಯಕನಕೊಪ್ಪದಲ್ಲಿ ಆಯೋಜಿಸಿರುವ ಬಾಲಗಂಗಾಧರ ಸ್ವಾಮೀಜಿ ಜಯಂತಿ ಉತ್ಸವದಲ್ಲಿ ಭಾಗವಹಿಸುವರು.

ಜ. 26ರಂದು ಬೆಳಗ್ಗೆ 8.30ಕ್ಕೆ ಆರ್​.ಎನ್​.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣದಲ್ಲಿ ಭಾಗವಹಿಸುವರು. 12 ಗಂಟೆಗೆ ಹುಬ್ಬಳ್ಳಿಯ ಕೋರ್ಟ್​ ವೃತ್ತದಲ್ಲಿನ ಸಾಯಿ ಮಂದಿರದಲ್ಲಿ ಶ್ರೀ ಸಾಯಿ ವೃದ್ಧಾಶ್ರಮ ನೀಲನಕ್ಷೆ ಅನಾವರಣ ಕಾರ್ಯಕ್ರಮ, ಮಧ್ಯಾಹ್ನ 1 ಗಂಟೆಗೆ ಹುಬ್ಬಳ್ಳಿ ತಾಲೂಕಿನ ವರೂರು ಕ್ಷೇತ್ರದಲ್ಲಿ ನಡೆಯುತ್ತಿರುವ ಮಹಾ ಮಸ್ತಕಾಭಿಷೇಕ ಮತ್ತು ಪಂಚ ಕಲ್ಯಾಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಜ. 27ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಆಯೋಜಿಸಿರುವ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮ, 28ರಂದು ಬೆಳಗ್ಗೆ 11 ಗಂಟೆಗೆ ಜಿಪಂ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿ ನವನಗರದ ಹೆಸ್ಕಾಂ ಮುಖ್ಯ ಕಚೇರಿಯಲ್ಲಿ ಕಲಘಟಗಿ ಕ್ಷೇತ್ರದ ವಿದ್ಯುತ್​ ಸಮಸ್ಯೆಗಳ ಕುರಿತು ಹೆಸ್ಕಾಂ ಹಾಗೂ ಕೆಪಿಟಿಸಿಎಲ್​ ಅಧಿಕಾರಿಗಳೊಂದಿಗೆ ಸಭೆ ಜರುಗಿಸುವರು. ರಾತ್ರಿ ನವದೆಹಲಿಗೆ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net