ಜಿಲ್ಲಾ ನ್ಯಾಯಾಧೀಶ ಸಿ.ಎಂ ಜೋಶಿ ವರ್ಗಾವಣೆ

CM Joshi (Judge)
Published on

ಉಡುಪಿ: ರಾಜ್ಯದ ವಿವಿಧ ಜಿಲ್ಲೆಗಳ ನ್ಯಾಯಾಧೀಶರನ್ನು ವರ್ಗಾವಣೆಗೊಳಿಸಿ ಮಂಗಳವಾರ ರಾಜ್ಯ ಉಚ್ಛ ನ್ಯಾಯಲಯ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾಗಿದ್ದ ಚಂದ್ರಶೇಖರ್ ಮೃತ್ಯಂಜಯ ಜೋಶಿ ಅವರನ್ನು ಬೆಳಗಾವಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾಗಿ ನೇಮಕ ಮಾಡಲಾಗಿದೆ.

ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾಗಿ ಸುಬ್ರಹ್ಮಣ್ಯ ಜೆ.ಎನ್ ( ಡಿಸ್ಟ್ರಿಕ್ ಜಡ್ಜ್, ಒಒಡಿ, ಕರ್ನಾಟಕ ಮೇಲ್ಮನವಿ ಟ್ರಿಬ್ಯೂನಲ್ ಸದಸ್ಯ) ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net