ಅಂಬಿಗರ ಚೌಡಯ್ಯ ಜಯಂತಿ ಪೂರ್ವಭಾವಿ ಸಭೆ

ac meeting koppal ambigara choudayya jayanthi
ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಸಂಬಂಧ ಕೊಪ್ಪಳದಲ್ಲಿ ಎಸಿ ಕ್ಯಾ.ಮಹೇಶ ಮಾಲಗಿತ್ತಿ ಅಧ್ಯಕ್ಷತೆಯಲ್ಲಿ ಶನಿವಾರ ಪೂರ್ವಭಾವಿ ಸಭೆ ನಡೆಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಸಮುದಾಯದ ಜಿಲ್ಲಾಧ್ಯಕ್ಷ ಸೋಮಣ್ಣ ಬಾರಕೇರ, ತಾಲೂಕು ಅಧ್ಯಕ್ಷ ಹುಲಗಪ್ಪ ಬಾರಕೇರ, ಕಾರ್ಯದರ್ಶಿ ರಾಜಾ ಕಲೆಗಾರ, ಮುಖಂಡರಾದ ಮಾರ್ಕಂಡೆಪ್ಪ ಪೂಜಾರ, ಕೃಷ್ಣ ಕಬ್ಬೇರ ಇದ್ದರು.
Published on

ಕೊಪ್ಪಳ:ಜಿಲ್ಲಾಡಳಿತದಿಂದ ಕೊಪ್ಪಳದಲ್ಲಿ ಜ.21ರಂದು ಅಂಬಿಗರ ಚೌಡಯ್ಯ ಜಯಂತಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಹಾಯಕ ಆಯುಕ್ತ ಕ್ಯಾ.ಮಹೇಶ ಮಾಲಗಿತ್ತಿ ಹೇಳಿದರು.

ನಗರದ ಎಸಿ ಕಚೇರಿ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸತಿ ಇಲಾಖೆಯಿಂದ ಅಂಬಿಗರ ಚೌಡಯ್ಯ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದರು.

ಜ.21ರಂದು ಜಿಲ್ಲೆಯ ಎಲ್ಲ ತಾಲೂಕುಗಳು, ಶಾಲಾ-ಕಾಲೇಜು, ಶಿಕ್ಷಣ ಸಂಸ್ಥೆಗಳಲ್ಲಿ ಆಚರಿಸಲಾಗುವುದು. ವಿವಿಧ ಇಲಾಖೆಗಳು ಜಯಂತಿ ಆಚರಣೆಗೆ ಸಹಕಾರ ನೀಡುವ ಜತೆಗೆ ಅಚ್ಚುಕಟ್ಟಾದ ವ್ಯವಸ್ಥೆ ಮಾಡಿ. ಅಂದು ಬೆಳಗ್ಗೆ 8.30 ಗಂಟೆಗೆ ನಗರದ ಸಿರಸಪ್ಪಯ್ಯ ಮಠದಿಂದ ಗಡಿಯಾರ ಕಂಬ ಮಾರ್ಗವಾಗಿ ಸಾಹಿತ್ಯ ಭವನದವರೆಗೆ ಅಂಬಿಗರ ಚೌಡಯ್ಯ ಭಾವಚಿತ್ರದ ಮೆರವಣಿಗೆ ನಡೆಯಲಿದೆ. 11 ಗಂಟೆಗೆ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ಇರಲಿದೆ.

ವೇದಿಕೆ ಅಂಲಕಾರ, ಮೂಲ ಸೌಕರ್ಯ, ಪ್ರತಿಭಾನಿತ್ವರಿಗೆ ಸನ್ಮಾನ, ಅಗತ್ಯ ಪೊಲೀಸ್​ ಬಂದೋಬಸ್ತ್​ ಒದಗಿಸಿ. ಗಣ್ಯರನ್ನು ಆಮಂತ್ರಿಸಿ. ವೇದಿಕೆ ಕಾರ್ಯಕ್ರಮದಲ್ಲಿ ನಾಡಗೀತೆ, ಸುಗಮ ಸಂಗೀತ ಕಲಾವಿದರು ಹಾಗೂ ಉಪನ್ಯಾಸ ನೀಡಲು ಉಪನ್ಯಾಸಕರನ್ನು ಸಮುದಾಯದ ಬೇಡಿಕೆ ಹಾಗೂ ಅವರ ಸಲಹೆಯಂತೆ ಸೂಚಿಸಿದವರನ್ನು ಆಹ್ವಾನಿಸಿ ಎಂದು ಸೂಚಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಸಮುದಾಯದ ಜಿಲ್ಲಾಧ್ಯಕ್ಷ ಸೋಮಣ್ಣ ಬಾರಕೇರ, ತಾಲೂಕು ಅಧ್ಯಕ್ಷ ಹುಲಗಪ್ಪ ಬಾರಕೇರ, ಕಾರ್ಯದರ್ಶಿ ರಾಜಾ ಕಲೆಗಾರ, ಮುಖಂಡರಾದ ಮಾರ್ಕಂಡೆಪ್ಪ ಪೂಜಾರ, ಕೃಷ್ಣ ಕಬ್ಬೇರ, ಯಮನಪ್ಪ ಕಬ್ಬೇರ, ಗಂಗಾಧರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net