ಕುವೆಂಪು ವಿಶ್ವ ಚೇತನ, ಎಡಿಸಿ ಸಿದ್ರಾಮೇಶ್ವರ ಹೇಳಿಕೆ

district koppal adc sidrameshwar kuvempu
Published on

ಕೊಪ್ಪಳ: ಕುವೆಂಪು ವಿಶ್ವ ಚೇತನ. ಅವರು ಯಾವುದೇ ಧರ್ಮದಕ್ಕೆ ಸೀಮಿತರಲ್ಲ. ಅವರು ಎಲ್ಲರ ಒಳಿತು ಬಯಸಿದ್ದರು ಎಂದು ಎಡಿಸಿ ಸಿದ್ರಾಮೇಶ್ವರ ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ವಿಶ್ವ ಮಾನವ ದಿನಾಚರಣೆ, ವಿಶ್ವಜಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದರು.

ಜಿಲ್ಲಾಡಳಿತದಿಂದ ಕೊಪ್ಪಳದಲ್ಲಿ ಡಿ.30ರಂದು ವಿಶ್ವ ಮಾನವ ದಿನ ಆಚರಿಸಲಾಗುವುದು. 2025ರ ಜನೆವರಿ 1ರಂದು ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲಾಗುವುದೆಂದರು.

ರಾಷ್ಟ್ರ ಕವಿ ಕುವೆಂಪು ಜನ್ಮ ದಿನ ಡಿ.29ರ ಭಾನುವಾರ ಬರಲಿದೆ. ಹೀಗಾಗಿ ಡಿ.30ರ ಸೋಮವಾರ ಬೆಳಗ್ಗೆ 10.30 ಗಂಟೆಗೆ ಕೊಪ್ಪಳದ ಸಾಹಿತ್ಯ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು. ಕುವೆಂಪು ಭಾವಚಿತ್ರಕ್ಕೆ ಪೂಜೆ ಸಲ್ಲಿಕೆ, ಅವರ ಗೀತೆಗಳಿಗೆ ಶಾಲಾ ಮಕ್ಕಳು ನೃತ್ಯ ರೂಪಕ ಮಾಡಲಿದ್ದಾರೆ. ವಿಶೇಷ ಉಪನ್ಯಾಸ ಇರಲಿದೆ ಎಂದು ಹೇಳಿದರು.

ಜನೆವರಿ 1ರ ಬೆಳಗ್ಗೆ 11 ಗಂಟೆಗೆ ಸಾಹಿತ್ಯ ಭವನದಲ್ಲೇ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣ ದಿನಾಚರಣೆ ಹಮ್ಮಿಕೊಳ್ಳಲಾಗುವುದು. ಕಾರ್ಯಕ್ರಮದಲ್ಲಿ ಪೂಜೆ, ಜಕಣಾಚಾರಿ ಕುರಿತು ವಿಶೇಷ ಉಪನ್ಯಾಸ ಹಾಗೂ ಇತರ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದರು.

ಎರಡೂ ದಿನಾಚರಣೆಗಳನ್ನು ಶಾಲಾ&ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಸಂಬಂಧಿಸಿದ ಅಧಿಕಾರಿಗಳು ಆಚರಿಸಿ. ಸಮಾರಂಭಗಳ ದಿನದಂದು ಕಾರ್ಯಕ್ರಮ ನಡೆವ ಸ್ಥಳಗಳಲ್ಲಿ ಸ್ವಚ್ಛತೆಗೆ ಕ್ರಮವಹಿಸಿ. ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿವ ನೀರಿನ ವ್ಯವಸ್ಥೆ ಮಾಡಿ. ಎಲ್ಲ ಸಿದ್ಧತೆಗಳನ್ನು ಅವಧಿಯೊಳಗೆ ಪೂರ್ಣಗೊಳಿಸಿ. ಸಾಹಿತಿಗಳು, ಸಮುದಾಯ ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಲು ಸೂಚಿಸಿದರು.

ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ, ಸಾಹಿತಿಗಳಾದ ಮಹಾಂತೇಶ ಮಲ್ಲನಗೌಡರ, ಪುಷ್ಪಲತಾ ಏಳುಬಾವಿ, ಪ್ರಮುಖರಾದ ಮಹಾಂತೇಶ ಕೊತಬಾಳ, ಬಸವರಾಜ ಶೀಲವಂತರ, ಶಿವಪ್ಪ ಹಡಪದ, ವಿಶ್ವಕರ್ಮ ಸಮುದಾಯದ ಮುಖಂಡರಾದ ಈಶಪ್ಪ ಬಡಿಗೇರ, ರುದ್ರಪ್ಪ ಬಡಿಗೇರ, ಉಮೇಶ ಪತ್ತಾರ, ಶೇಖರಪ್ಪ ಬಡಿಗೇರ, ದೇವೇಂದ್ರಪ್ಪ ರಾಜೂರು, ಬ್ರಹ್ಮಾನಂದ ಬಡಿಗೇರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net