

ಕೊಪ್ಪಳ: ಜಾಗೃತಿ ಅರಿವು ಸಪ್ತಾಹ ಅಂಗವಾಗಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಎಡಿಸಿ ಸಿದ್ರಾಮೇಶ್ವರ ಅಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ವರ್ಷ ್ಚ್ಠ್ಝculture of integrity for Nations prosperity ಎಂಬುದು ಘೋಷ ವಾಕ್ಯ. ಸಾರ್ವಜನಿಕ ಆಡಳಿತದ ಎಲ್ಲ ಕ್ಷೇತ್ರಗಳಲ್ಲಿ ಭ್ರಷ್ಟಾಚಾರ ತೊಲಗಿಸಿ ಉತ್ತಮ ಆಡಳಿತಕ್ಕಾಗಿ ಪಾರದರ್ಶಕ ನೀತಿಗಳನ್ನು ರೂಪಿಸಬೇಕಿದೆ. ಪರಿಣಾಮಕಾರಿಯಾಗಿ ಅವುಗಳನ್ನು ಜಾರಿಗೊಳಿಸಲು ಮತ್ತು ಇಂದಿನ ವ್ಯವಸ್ಥೆ ಸುಧಾರಿಸಲು ಸಂಬಂಧಪಟ್ಟವರೆಲ್ಲರನ್ನು ಒಗ್ಗೂಡಿಸಿ ಜಾಗೃತಿ ಮೂಡಿಸುವುದು ಸಪ್ತಾಹ ಉದ್ದೇಶ ಎಂದು ತಿಳಿಸಿದರು.
ಜಿಲ್ಲಾ ತರಬೇತಿ ಸಂಸ್ಥೆ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ, ಅಬಕಾರಿ ಉಪ ಅಧೀಕ್ಷಕಿ ಭಾರತಿ, ಗ್ರೇಡ್&2 ತಹಸೀಲ್ದಾರ್ ವಿನಾಯಕ ಗೊಡಬೋಲೆ, ರವಿಕುಮಾರ ವಸ್ತ್ರದ ಇತರರಿದ್ದರು.