ದೇಶ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮುಖ್ಯ

district koppal alavandi voters registration drive
Published on

ಕೊಪ್ಪಳ: ಸುಭದ್ರ ದೇಶ ನಿರ್ಮಾಣದಲ್ಲಿ ಯುವ ಮತದಾರರ ಪಾತ್ರ ಮುಖ್ಯವಾಗಿದೆ ಎಂದು ತಾಪಂ ಇಒ ದುಂಡಪ್ಪ ತುರಾದಿ ಹೇಳಿದರು.

ತಾಲೂಕಿನ ಅಳವಂಡಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಮಂಗಳವಾರ ಯುವ ಮತದಾರರ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಯುಜನತೆಗೆ ಮತದಾನ ಮಹತ್ವ ತಿಳಿದಿಲ್ಲ. ದೇಶದ ಅಭಿವೃದ್ಧಿಗೆ ಚುನಾವಣೆಗಳಲ್ಲಿ ಭಾಗವಹಿಸುವಿಕೆ ಮುಖ್ಯ. ಪ್ರತಿ ಮತವೂ ಅಮೂಲ್ಯ. ಮತದಾನ ಪವಿತ್ರ ಕಾರ್ಯ. ದೇಶ ಕಟ್ಟುವಲ್ಲಿ ಪ್ರಮುಖ ಪಾತ್ರವಹಿಸಲಿದೆ. 18 ವರ್ಷ ತುಂಬಿದ ಎಲ್ಲ ಯುಜನತೆ ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಿ. ಶಾಲಾ ವರ್ಗಾವಣೆ ಪ್ರಮಾಣ ಪತ್ರ ಪ್ರತಿ, ಎರಡು ಪಾಸ್​ಪೋರ್ಟ್​ ಅಳತೆ ಭಾವಚಿತ್ರ ಮತ್ತು ನಿಮ್ಮ ಪಾಲಕರ ಮತದಾನ ಗುರುತಿನ ಚೀಟಿ ಪ್ರತಿಯನ್ನು ಮತಗಟ್ಟೆ ಅಧಿಕಾರಿಗೆ ಸಲ್ಲಿಸಿ. ನೋಂದಣಿ ಮಾಡಿಕೊಳ್ಳಿ. ನಿಮಮ್​ ನೆರೆಹೊರೆಯಲ್ಲಿ, ಸ್ನೇಹಿತರು, ಪರಿಚಿತರಿಗೆ ಈ ಬಗ್ಗೆ ತಿಳಿವಳಿಕೆ ಮೂಡಿಸಿ ಎಂದು ಸಲಹೆ ನೀಡಿದರು.

ಕೊಪ್ಪಳ ತಹಸೀಲ್ದಾರ್​ ವಿಠ್ಠಲ್​ ಚೌಗಲಾ ಮಾತನಾಡಿ, ಪ್ರತಿಯೊಬ್ಬ ಯುವ ಮತದಾರ ನೋಂದಣಿ ಮಾಡಿಕೊಳ್ಳಬೇಕು. 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಚುನಾವಣಾ ಆಯೋಗ ಮತದಾರರ ಗುರುತಿನ ಚೀಟಿ ನೀಡಲಿದೆ. ಎಲ್ಲ ಚುನಾವಣೆಗಳಲ್ಲಿ ಮತದಾನ ಮಾಡುವುದು ಮತದಾರರ ಹಕ್ಕು ಮತ್ತು ಕರ್ತವ್ಯ. ಒಮ್ಮೆ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾದರೆ ಮತ್ತೆ ಮತ್ತೆ ಸೇರಿಸುವ ಅಗತ್ಯವಿಲ್ಲ ಎಂದರು.

ಕಾಲೇಜು ಪ್ರಾಚಾರ್ಯ ಜಗದೀಶ ಹಾಲದಕಟ್ಟಿ, ತಾಪಂ ತಾಲೂಕ ಯೋಜನಾಧಿಕಾರಿ ರಾಜೇಸಾಬ ನದಾಫ್​, ತಾಲೂಕ ಸ್ವೀಪ್​ ತಂಡದ ಸದಸ್ಯ ಬಸವರಾಜ ಬಳಿಗಾರ, ಗ್ರಾಪಂ ಕಾರ್ಯದರ್ಶಿ ಬಸವರಾಜ,ಉಪನ್ಯಾಸಕರು, ಕಾಲೇಜಿನ ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net