ಮಾನವ ಕಳ್ಳ ಸಾಗಣೆಯಾದಲ್ಲಿ ದೂರು ನೀಡಿ

district koppal anti human trafficking day clebration awarness programme
Published on

ಕೊಪ್ಪಳ: ಮಾನವ ಕಳ್ಳ ಸಾಗಣೆ ಗಂಭೀರ ಆರೋಪ. ಅಂಥ ಟನೆಗಳು ಕಂಡುಬಂದರೆ ದೂರು ದಾಖಲಿಸುವಂತೆ ಹಿರಿಯ ಸಿವಿಲ್​ ನ್ಯಾಯಾಧೀಶ ಮಹಾಂತೇಶ ಎಸ್​.ದರಗದ ತಿಳಿಸಿದರು.

ನಗರದ ತಾಪಂ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳು ಗುರುವಾರ ಹಮ್ಮಿಕೊಂಡಿದ್ದ ಮಾನವ ಕಳ್ಳ ಸಾಗಣೆ ತಡೆ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾನವ ಕಳ್ಳ ಸಾಗಣೆ ಮಾನವ ಹಕ್ಕುಗಳ ಉಲ್ಲಂಘನೆ. ಜನರು ಬಲವಂತ, ಮೋಸದಿಂದ ಅಥವಾ ಬಲತ್ಕಾರದಿಂದ ದುಡಿಮೆ, ಲೈಂಗಿಕ ಶೋಷಣೆಗೆ ಸಾಗಿಸಲ್ಪಡುತ್ತಾರೆ. ಈ ಸಮಸ್ಯೆಯ ವಿರುದ್ಧ ಜಾಗೃತಿ ಮೂಡಿಸಿ. ಇಂತಹ ಪ್ರಕರಣಗಳಲ್ಲಿ ಸಿಲುಕಿಕೊಂಡವರನ್ನು ರಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ ನಟರಾಜ ಮಾತನಾಡಿ, ಮಾನವ ಕಳ್ಳ ಸಾಗಣೆ ಕಂಡುಬಂದಲ್ಲಿ ತಕ್ಷಣ ದೂರು ದಾಖಲಿಸುವಂತೆ ಹಾಗೂ ಅಧಿಕಾರಿಗಳಿಗೆ ಮಾಹಿತಿ ನೀಡಲು ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಮಾತನಾಡಿ, ಗ್ರಾಪಂ ಹಂತದಲ್ಲಿ ಮಕ್ಕಳ ಕಾವಲು ಸಮಿತಿ ರಚಿಸಲಾಗಿದೆ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸಮಿತಿಯಲ್ಲಿ ಚರ್ಚಿಸಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅನ್ನಪೂರ್ಣ ಕುಬಕಡ್ಡಿ, ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ತಾಪಂ ಸಹಾಯಕ ನಿರ್ದೇಶಕ ಮಹೇಶ ಎಚ್​., ಮೇಲ್ವಿಚಾರಕಿ ಚಂದ್ರಮ್ಮ, ಸಿಡಿಪಿಒ ರೋಹಿಣಿ ಕೊಟಗಾರ, ಎಸಿಡಿಪಿಒ ರೂಪ ಗಂದಧ, ಸಖಿ ಒನ್​ ಸ್ಟಾಪ್​ ಸೆಂಟರ್​ ಅಧಿಕಾರಿ ಯಮುನಾ ಬೆಸ್ತರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net