ಕೊಪ್ಪಳದಲ್ಲಿ ಬಾಬು ಜಗಜೀವನರಾಮ್​ ಜನ್ಮದಿನಾಚರಣೆ

BABU JAGAJEEVANRAM JAYANTHI DISTRICT ADMINISTRATION
ಕೊಪ್ಪಳದಲ್ಲಿ ಜಿಲ್ಲಾಡಳಿತದಿಂದ ಶುಕ್ರವಾರ ಬಾಬು ಜಗಜೀವನರಾಮ್​ ಜನ್ಮದಿನಾಚರಣೆ ಆಚರಿಸಲಾಯಿತು. ಡಿಸಿ ನಲಿನ್​ ಅತುಲ್​, ಎಡಿಸಿ ಸಾವಿತ್ರಿ ಕಡಿ, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್​., ಡಿಯುಡಿಸಿ ಪಿಡಿ ರೇಷ್ಮಾ ಹಾನಗಲ್​, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ರಾಜು ತಳವಾರ ಇದ್ದರು.
Published on

ಕೊಪ್ಪಳ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸತಿ ಇಲಾಖೆಯಿಂದ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್​ ಅವರ 117ನೇ ಜನ್ಮದಿನ ಆಚರಿಸಲಾಯಿತು.

ಲೋಕಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಅಂಗವಾಗಿ ಸರಳ ಕಾರ್ಯಕ್ರಮ ನೆರವೇರಿಸಲಾಯಿತು. ಜಿಲ್ಲಾಧಿಕಾರಿ ನಲಿನ್​ ಅತುಲ್​ ಬಾಬು ಜಗಜೀವನರಾಮ್​ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಎಡಿಸಿ ಸಾವಿತ್ರಿ ಕಡಿ, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್​., ಡಿಯುಡಿಸಿ ಪಿಡಿ ರೇಷ್ಮಾ ಹಾನಗಲ್​, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ರಾಜು ತಳವಾರ, ಡಿಡಿಪಿಐ ಶ್ರೀಶೈಲ ಬಿರಾದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ತಿಪ್ಪಣ್ಣ ಸಿರಸಗಿ, ಡಿಸಿ ಕಚೇರಿ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net