ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Published on

ಕೊಪ್ಪಳ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್​ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪರಿಶಿಫ್ಟಿ ಜಾತಿ, ಪರಿಶಿಫ್ಟಿ ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-&26ನೇ ಸಾಲಿಗೆ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್​ 16 ಕೊನೆಯ ದಿನಾಂಕವಾಗಿದ್ದು, ಅರ್ಜಿ ಸಲ್ಲಿಸಲು ಪ್ರವರ್ಗ-1, ಎಸ್​.ಸಿ. ಮತ್ತು ಎಸ್​.ಟಿ. ವಿದ್ಯಾರ್ಥಿಗಳ ಪೋಫಿಕರ ವಾರ್ಷಿಕ ಆದಾಯ ರೂ. 2.50 ಲಕ್ಷ ಮತ್ತು ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳ ಪೋಫಿಕರ ವಾರ್ಷಿಕ ಆದಾಯ ರೂ. 1ಲಕ್ಷ ಮಿತಿಯಲ್ಲಿರಬೇಕು.

ಅರ್ಜಿಯನ್ನು ಇಲಾಖೆಯ ವೆಬ್​ಸೈಟ್​ ಣಣಠಿಠ://ಠಠಿ.ಞಚಿಡಿಟಿಚಿಣಚಿಞಚಿ.ರಠತ.ಟಿ/ಛಛಿತಿಜ ನಲ್ಲಿ ಸಲ್ಲಿಸಬೇಕು. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್​ಸೈಟ್​ www.bcwd.karnataka.gov.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್​ bcwdhelpline@gmail.comಮುಖಾಂತರ, ಸಹಾಯವಾಣಿ ಸಂಖ್ಯೆ: 8050770004, 8050770005 ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net