ಕೊಪ್ಪಳ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿನ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್ ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಫೆಬ್ರವರಿ 10 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗಾಗಿ ವೆಬ್ಸೈಟ್ ಜಠಿಠಿಟಠ://ಚ್ಚಿಡಿಛ.ಚ್ಟ್ಞಚಠಿಚಚ.ಜಟಡ.ಜ್ಞಿ/ ನೋಡಬಹುದು ಅಥವಾ ಸಹಾಯವಾಣಿ ಸಂಖ್ಯೆ: 8050770004 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.