

ಕೊಪ್ಪಳ: ತಾಲೂಕಿನ ಬಹದ್ದೂರಬಂಡಿ ಸರ್ಕಾರಿ ಶಾಲೆಗೆ ತಹಸೀಲ್ದಾರ ವಿಠ್ಠಲ ಚೌಗಲಾ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.
ಬಿಸಿಯೂಟದ ಕೊಠಡಿಗೆ ಭೇಟಿ ನೀಡಿ ಮಕ್ಕಳಿಗೆ ನೀಡಲಾಗುವ ಬಿಸಿಯೂಟ ಪರೀಸಿದರು. ಮಕ್ಕಳ ಶೈಕ್ಷಣಿಕ ಪ್ರಗತಿ ಪರಿಶೀಲನೆ ಮಾಡಿದರು. ಮುಖ್ಯ ಶಿಕ್ಷಕ ಬೀರಪ್ಪ ಅಂಡಗಿ, ಎಸ್ಡಿಎಂಸಿ ಅಧ್ಯಕ್ಷ ಮಂಜುನಾಥ ಕುರಿ, ಸದಸ್ಯ ಬಾಬಾ ಕಿಲ್ಲೇದಾರ, ಶಿಕ್ಷಕರಾದ ಭಾರತಿ ಹವಳೆ, ಗಂಗಮ್ಮ ಇತರರಿದ್ದರು.