ಬಹದ್ದೂರ್ಬಂಡಿ-ಹೊಸಳ್ಳಿ ರಸ್ತೆ ಅಭಿವೃದ್ಧಿಗೆ 2.50 ಕೋಟಿ ಅನುದಾನ

district koppal bahaddura bandi village mla raghavendra hitnal road work
Published on

ಕೊಪ್ಪಳ: ಇಂದು ಶಾಸಕ ರಾಘವೇಂದ್ರ ಹಿಟ್ನಾಳ ಅವರು ಕೊಪ್ಪಳ ತಾಲೂಕಿನ ಬಹದ್ದೂರ್ ಬಂಡಿ ಗ್ರಾಮದಲ್ಲಿ ಖಬರ್ ಸ್ಥಾನ ಕ್ಕೆ ಕಂಪೌಂಡ್ ನಿರ್ಮಾಣದ ಕಾಮಗಾರಿ ಅಡಿಗಲ್ಲು ನೆರವೇರಿಸಿದರು.

ನಂತರ ಮಾತನಾಡಿ, ಬಹದ್ದೂರ್ ಬಂಡಿ-ಹೊಸಳ್ಳಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಅಭಿವೃದ್ಧಿಗಾಗಿ ಈಗಾಗಲೇ 2.50 ಕೋಟಿ ಅನುದಾನ ಮೀಸಲಿಡಲಾಗಿದೆ. ಶೀಘ್ರದಲ್ಲಿ ಕಾಮಗಾರಿ ಪ್ರಾರಂಭ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಹದಗೆಟ್ಟಿರುವ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿ ಪಡಿಸುತ್ತೇವೆ.34.50 ಕೋಟಿ ವೆಚ್ಚದಲ್ಲಿ ಕ್ಷೇತ್ರದಲ್ಲಿ ಹದಗೆಟ್ಟಿರುವ ರಸ್ತೆಗಳ ಅಭಿವೃದ್ಧಿಗೆ ಅನುದಾನ ತರುವ ಕೆಲಸ ಮಾಡಿದ್ದೇವೆ. ಸ್ವಲ್ಪ ಮಳೆ ಕಡಿಮೆ ಆದ ತಕ್ಷಣದಲ್ಲಿ ಎಲ್ಲಾ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳು ಪ್ರಾರಂಭಗೊಳ್ಳಲಿವೆ ಎಂದು ಮಾಹಿತಿ ನೀಡಿದರು.

ಬಹದ್ದೂರ್ ಬಂಡಿಯಲ್ಲಿ ಶಾದಿ ಮಹಲ್ ನಿರ್ಮಾಣಕ್ಕೆ ಸ್ಥಳ ನೀಡಿದರೆ ಅದಕ್ಕೆ ಅನುದಾನ ಕೊಡಿಸುವ ಕೆಲಸ ಮಾಡುತ್ತೇವೆ. ಕೊಪ್ಪಳಕ್ಕೆ ಹಿಂದೆ ಬಿಡುಗಡೆ ಆಗಿದ್ದ ಶಾದಿ ಮಹಲ್ ಗಳಿಗೆ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರು ಅನುಧಾನ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವರನ್ನು ಬಣ್ಣಿಸಿದರು.

ಈ ವೇಳೆ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್,ನಗರ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ್ ಗುಪ್ತಾ,ಪ್ರಸನ್ನ ಗಡಾದ್, ಕಾಟನ್ ಪಾಷಾ, ಖತಿಬ್ ಬಾಷು ಭೈ,ಕೆ. ಎಂ ಸೈಯದ್,ಹನಮೇಶ ಹೊಸಳ್ಳಿ,ಚಾಂದಪಾಷಾ ಕಿಲ್ಲೆದರ್, ಯೋಗಾನಂದ ಲೇಬಗೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net