ಬಸವ ಜಯಂತಿ ಅದ್ದೂರಿ ಆಚರಣೆ

district koppal basava jayanthi meet adc koppal sidrameswara
Published on

ಕೊಪ್ಪಳ: ಜಿಲ್ಲಾಡಳಿತದಿಂದ ಏ.30ರಂದು ಬಸವ ಜಯಂತಿ ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಆಚರಿಸೋಣ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ತಿಳಿಸಿದರು.

ಜಯಂತಿ ಆಚರಣೆ ಅಂಗವಾಗಿ ಡಿಸಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಅಂದು ಬೆಳಗ್ಗೆ 8 ಗಂಟೆಗೆ ಅಂಬಿಗರ ಚೌಡಯ್ಯ ಉದ್ಯಾನದಲ್ಲಿರುವ ಬಸವೇಶ್ವರ ಪುತ್ಥಳಿಗೆ ಹೂ-ಮಾಲೆ ಹಾಕಲಾಗುವುದು. ಬೆಳಗ್ಗೆ 9ಕ್ಕೆ ಬಸವೇಶ್ವರ ವೃತ್ತದಲ್ಲಿನ ಮೂರ್ತಿಗೆ ಮಾಲಾರ್ಪಣೆ ನಡೆಯಲಿದೆ. ಸಂಜೆ 4 ಗಂಟೆಗೆ ಗಡಿಯಾರ ಕಂಬ ವೃತ್ತ ಬಳಿಯ ಮಹೇಶ್ವರ ದೇವಸ್ಥಾನದಿಂದ ಗವಿಮಠದವರೆಗೆ ಬಸವೇಶ್ವರ ಭಾವಚಿತ್ರದ ಮೆರವಣಿಗೆ ಇರುವುದು. ಗವಿಮಠ ರಥ ಬೀದಿ ಮೈದಾನದಲ್ಲಿ ಸಂಜೆ 6 ಗಂಟೆಗೆ ವೇದಿಕೆ ಕಾರ್ಯಕ್ರಮ ಇರಲಿದೆ. ಬಸವ ಸಮಿತಿ ಅಧ್ಯಕ್ಷ ಡಾ.ಅರವಿಂದ ಜತ್ತಿ ವಿಶೇಷ ಉಪನ್ಯಾಸ ನೀಡುವರು ಎಂದರು.

ಮೆರವಣಿಗೆ ರಥದ ಸಿಂಗಾರ ಒಳ್ಳೆಯ ರೀತಿಯಲ್ಲಿರಲಿ. ಕನ್ನಡ ಮತ್ತು ಸಂಸತಿ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳು ನಿಮ್ಮ ಜವಾಬ್ದಾರಿ ಸರಿಯಾಗಿ ನಿಭಾಯಿಸಿ. ರಾಜ್ಯದ ಸಾಂಸತಿಕ ನಾಯಕ ಬಸವಣ್ಣ ಜಯಂತಿ ಅದ್ದೂರಿಯಾಗಿ ನೆರವೇರುವಂತೆ ನೋಡಿಕೊಳ್ಳಲು ಸಲಹೆ ನೀಡಿದರು.

ಬಸವ ಸಮಿತಿ ಜಿಲ್ಲಾಧ್ಯಕ್ಷ ಬಸವರಾಜ ಬಳ್ಳೊಳ್ಳಿ, ಲಿಂಗಾಯತ ಧರ್ಮ ಮಹಾಸಭಾ ರಾಜ್ಯಾಧ್ಯಕ್ಷ ಈಶಣ್ಣ ಕೊರನಳ್ಳಿ, ಪ್ರಮುಖರಾದ ಶಾಂತಣ್ಣ ಓಜನಳ್ಳಿ, ಈಶ್ವರಪ್ಪ ತೋಟಪ್ಪ ದಿನ್ನಿ, ನಗರಸಭೆ ಪೌರಾಯುಕ್ತ ಗಣಪತಿ ಪಾಟೀಲ್​, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೆಶಕ ಕೊಟ್ರೇಶ ಮರಬನಳ್ಳಿ, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ, ಅಂಬೇಡ್ಕರ್​ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕಿ ಪುಷ್ಪಲತಾ ಎಸ್​. ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net