ಜನ ವಿರೋಧಿ ಬಜೆಟ್​ : ನವೀನ್​ ಗುಳಗಣ್ಣವರ

district koppal bjp naveen gulagannavar budjet
Published on

ಕೊಪ್ಪಳ: ಪ್ರಸಕ್ತ ಬಜೆಟ್​ನಲ್ಲಿ ಕೃಷಿಕರು, ಕಾರ್ಮಿಕರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಎನ್​ಎಚ್​ಎಂ ನೌಕರರು ಸೇರಿದಂತೆ ಶ್ರಮಿಕ ವರ್ಗಗಳನ್ನು ಕಡೆಗಣಿಸಲಾಗಿದೆ ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣವರ್​ ಆರೋಪಿಸಿದ್ದಾರೆ.

ಅಧಿಕಾರಕ್ಕೆ ಬರುವ ಮುನ್ನ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಯಾವುದೇ ಅಂಶಗಳನ್ನು ಬಜೆಟ್​ ನಲ್ಲಿ ಕಾರ್ಯಗತಗೊಳಿಸಲು ಯಾವುದೇ ಹೊಸ ಭರವಸೆಯ ಹೆಜ್ಜೆ ಇಡದೇ ಕೊಟ್ಟ ಮಾತು ತಪ್ಪಿದ ಜನ ವಿರೋಧಿ ಬಜೆಟ್​ ಸಿದ್ದರಾಮಯ್ಯನವರು ಮಂಡಿಸಿದ್ದಾರೆ.

ಬಜೆಟ್​ ನಲ್ಲಿ ಘೋಷಿಸಿರುವ ಯೋಜನೆಗಳು ಕೇವಲ ಕಾಗದದಲ್ಲೇ ಉಳಿಯುವ ಸಾಧ್ಯತೆ ಗೋಚರವಾಗುತ್ತಿದೆ. 'ಹೇಳುವುದು ಒಂದು ಮಾಡುವುದು ಇನ್ನೊಂದು' ಎಂಬಂತೆ ಈ ಬಜೆಟ್​ ಆಗಬಾರದು, ಕಳೆದ ಬಜೆಟ್​ ನಲ್ಲಿ ಘೋಫಿಣೆಯಾಗಿದ್ದವೆಲ್ಲವೂ ಘೋಫಿಣೆಯಾಗಿಯೇ ಉಳಿದಿದೆ, ಈ ಬಜೆಟ್​ ಗೂ ಅದೇ ಗತಿ ಆಗುವ ಸಾಧ್ಯತೆಯೇ ಹೆಚ್ಚು ಎನ್ನುವುದು ರಾಜ್ಯದ ದಯನೀಯ ಆರ್ಥಿಕ ಪರಿಸ್ಥಿತಿ ಹೇಳುತ್ತಿದೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net