ಅಭಿನಂದನಾ ಗ್ರಂಥ ಬಿಡುಗಡೆ ಜೂ.22ರಂದು

district koppal book release panchamasali community
Published on

ಕೊಪ್ಪಳ: ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ನಿಕಟಪೂರ್ವ ಅಧ್ಯಕ್ಷ ಬಸವರಾಜ ದಿಂಡೂರ ಅವರ ಗೌರವಾಭಿನಂದನೆ ಹಾಗೂ ಜೀವನೋತ್ಸಾಹ ಹೆಸರಿನ ಅಭಿನಂದನಾ ಗ್ರಂಥ ಬಿಡುಗೆ ಜೂ.22ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂದ ಅಧ್ಯಕ್ಷ ಸೋಮನಗೌಡ ಪಾಟೀಲ್​ ತಿಳಿಸಿದರು.

ನಗರದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕೊಪ್ಪಳದ ಮಧುಶ್ರೀ ಗಾರ್ಡನ್​ನಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಇರಲಿದೆ. ಗವಿಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ, ಹರಿಹರವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಸಂದ ಪ್ರಧಾನ ಕಾರ್ಯದರ್ಶಿ ಬಿ.ಸಿ. ಉಮಾಪತಿ, ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಸಂಸದ ಬಸವರಾಜ ಬೊಮ್ಮಾಯಿ, ಸಚಿವರಾದ ಶಿವರಾಜ ತಂಗಡಗಿ, ಶಿವಾನಂದ ಪಾಟೀಲ್​, ನಿರಾಣಿ ಸಮೂಹದ ಅಧ್ಯಕ್ಷ ಮುರುಗೇಶ್​ ನಿರಾಣಿ ಸೇರಿ ಅನೇಕ ಗಣ್ಯರು ಭಾಗಿಯಾಗುವರು ಎಂದು ಹೇಳಿದರು.

ಗ್ರಂಥದ ಸಂಪಾದಕ ಬಸವರಾಜ ಸಂಕನಗೌಡರ, ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶೇಖರಪ್ಪ ಮುತ್ತೇನವರ, ಮಹಿಳಾ ಘಟಕ ಅಧ್ಯಕ್ಷೆ ಸುಮಂಗಲಾ ಹಂಚಿನಾಳ, ಕೊಪ್ಪಳ ತಾಲೂಕು ಅಧ್ಯೆ ಪ್ರತಿಮಾ ಪಟ್ಟಣಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವರಾಜ ಹಾಲಸಮುದ್ರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net